ಹುಬ್ಬಳ್ಳಿ: ಲಾಕ್‌ಡೌನ್ ಮೇ 17ರವರೆಗೆ ವಿಸ್ತರಣೆ ಆದ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಮನೆ ಮನೆಗೆ ತೆರಳಿ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ನಗರದ ಚಂದ್ರನಾಥನಗರ, ವಿಜಯನಗರ ಸೇರಿ ಸುತ್ತಮುತ್ತಲಿನ ಬಡಾವಣೆಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಆರೋಗ್ಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊರೊನಾ ವೈರಸ್‌ನ ಗುಣಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ ಇರುವುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮನೆಯಲ್ಲಿರುವ ಸದಸ್ಯರ ಸಂಖ್ಯೆ ಹಾಗೂ ಮೊಬೈಲ್ ನಂಬರ್ ನಮೋದಿಸಿಕೊಳ್ಳುತ್ತಿದ್ದಾರೆ. ಸದ್ಯ ಲಾಕ್‌ಡೌನ್‌ನಿಂದ ಜನ ಮನೆಯಲ್ಲಿರುವುದರಿಂದ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗ್ತಿಲ್ಲ. ಜನರು ಕೂಡ ಅಧಿಕಾರಿಗಳ ಜೊತೆ ಸ್ಪಂದಿಸುತ್ತಿದ್ದಾರೆ.