ಹುಬ್ಬಳ್ಳಿ: ಸುಮಧುರ ಎಂಟಟೇನರ್ಸ್ ವತಿಯಿಂದ ಹಾರ್ಟ್ ಬೀಟ್ಸ್ ಸಂಗೀತ ಸಂಜೆ ಕಾರ್ಯಕ್ರಮವನ್ನು ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉತ್ತರ ಕರ್ನಾಟಕದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದೆಷ್ಟೋ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗದೆ ಮರೆ ಮಾಚುತ್ತಿವೆ. ಹೀಗಾಗಿ ಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಸಂಗೀತ ಸಂಜೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕಾರ್ಯಕ್ರಮ ಸಂಯೋಜಕಿ ಪ್ರೇಮಾ ಹೂಗಾರ ಹೇಳಿದರು.
ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಭಾಗವಹಿಸಲು ಯಾವುದೇ ವಯಸ್ಸಿನ ನಿರ್ಬಂಧ ಇರುವುದಿಲ್ಲ. ಯಾರಾದರೂ ಇದರಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ತೋರ್ಪಡಿಸಿಕೊಳ್ಳಲು ಸೂಕ್ತ ವೇದಿಕೆಯಾಗಿದೆ. ಕಲೆಯನ್ನು ಪ್ರೋತ್ಸಾಹಿಸುವ ದೇಯೋದ್ದೇಶವನ್ನು ಸಂಸ್ಥೆ ಹೊಂದಿದೆ. ಸಂಗೀತಾಸಕ್ತರ ಹೃದಯದ ಬಡಿತ ಕೇಳಲು ಇದೊಂದು ಸುವರ್ಣ ಅವಕಾಶ ಅಂತ ಹಾರ್ಟ್ ಬೀಟ್ಸ್ ಸಂಸ್ಥೆಯ ಸುನೀಲ್ ಹೇಳಿದರು.
ಕಾರ್ಯಕ್ರಮದಲ್ಲಿ ನೂರಾರು ಕಲಾವಿದರು ಕೇಳುಗರಿಗೆ ಸಂಗೀತದ ರಸದೌತಣ ನೀಡಿದರು.