ಹುಬ್ಬಳ್ಳಿ: ಮಾಸ್ಕ್ ಧರಿಸದೆ ಓಡಾಡುತ್ತಿರುವ ಜನರಿಗೆ ದಂಡ ಹಾಕಿದ್ದರಿಂದ ಇದೀಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ದಂಡ ಸಂಗ್ರಹವಾಗಿದೆ.
ನಗರದಲ್ಲಿ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಸಾಮಾಜಿಕ ಅಂತರ ಕಾಪಾಡದೆ ಓಡಾಡಿದವರಿಗೆ ದಂಡ ವಿಧಿಸಲಾಗುತ್ತಿದೆ.
3ನೇ ಅಲೆ ಭೀತಿಯಿದ್ದರೂ ನಿರ್ಲಕ್ಷ್ಯ:
ಅನ್‌ಲಾಕ್ ನಂತರವೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಜನರಿಗೆ ಕೊರೊನಾ ಜಾಗೃತಿ ಮೂಡಿಸುತ್ತಿದೆ. ಆದರೂ ಜನತೆ ಕ್ಯಾರೆ ಎನ್ನದೆ, ಮಾರುಕಟ್ಟೆಯ ಪ್ರದೇಶಗಳಲ್ಲಿ ಬೇಕಾಬಿಟ್ಟಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದು, 3ನೇ ಅಲೆಯ ಭೀತಿ ಶುರುವಾಗಿದೆ.
ಸರ್ಕಾರದ ನಿರ್ದೇಶನದಂತೆ ಕೊರೊನಾ ನಿಯಮ ಉಲ್ಲಂಘನೆ ಮಾಡುವವರಿಗೆ ತಕ್ಕ ಪಾಠ ಕಲಿಸಲು ಪಾಲಿಕೆ 4 ಜನ ಮಾಜಿ ಸೈನಿಕರನ್ನು ಮಾರ್ಷಲ್‌ಗಳಾಗಿ ನೇಮಿಸಿದೆ. ಇವರು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ನಿಯಮ ಉಲ್ಲಂಘಿಸುವವರಿಗೆ ಜಾಗೃತಿ ಮೂಡಿಸುವುದರ ಜತೆಗೆ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ.