ಧಾರವಾಡ: ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ನಿರಂತರ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಜನಜೀವನ ಕೆಲ ಕಾಲ ಅಸ್ತವ್ಯಸ್ತವಾಗಿತ್ತು.
ಧಾರವಾಡದಲ್ಲಿ ವರುಣಾರ್ಭಟಕ್ಕೆ ರೈತರು ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಮಳೆಯಾಗುವುದರಿಂದ ಹತ್ತಿ, ಮೆಣಸಿನಕಾಯಿ ಬೆಳೆಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.