ಹುಬ್ಬಳ್ಳಿ/ಧಾರವಾಡ: ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಟ್ಟು ಬಿಡದೇ ಸುರಿದ ಮಳೆಗೆ ಹಳೇ ಹುಬ್ಬಳ್ಳಿಯಲ್ಲಿ ಮನೆಗಳು ಕುಸಿದು ಭಾರಿ ಪ್ರಮಾಣದ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆಗಳು ತೇವಗೊಂಡು ಗೋಡೆಗಳು ಕುಸಿದಿವೆ. ಪರಿಣಾಮ ಮನೆಯಲ್ಲಿದ ವಸ್ತುಗಳೆಲ್ಲಾ ಮಣ್ಣಿನಲ್ಲಿ ಹೂತುಹೋಗಿ ಅಪಾರ ಪ್ರಮಾಣದ ಹಾನಿಯಾಗಿವೆ. ಘಟನೆ ಕುರಿತು ಪಾಲಿಕೆ ಅಧಿಕಾರಿಗಳಿಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಕೂಡಲೇ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿ ಪರಿಹಾರ ಒದಗಿಸಬೇಕೆಂದು ಮಾಲೀಕರು ಒತ್ತಾಯಿಸಿದ್ದಾರೆ.
ಕುಂದಗೋಳ ತಾಲೂಕಿನ ಗುಡ್ಯನಾಕಟ್ಟಿ ಗ್ರಾಮದ ಪಕ್ಕ ಇರುವ ಹಳ್ಳ ತುಂಬಿ ಹರಿಯುತ್ತಿದ್ದು ಗ್ರಾಮಸ್ಥರು ಹಾಗೂ ಪ್ರಯಾಣಿಕರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪ್ರಸಂಗ ಬಂದೊದಗಿದೆ. ಇನ್ನೂ ಹೆಚ್ಚು ಕಾಲ ಮಳೆಯಾದ್ರೆ ರಸ್ತೆ ಸಂಚಾರ ಅಸ್ತವ್ಯಸ್ಥವಾಗುವ ಸಂಭವವಿದೆ.