ಹುಬ್ಬಳ್ಳಿ : ನಗರದಲ್ಲಿ ಗಾಳಿ ಸಹಿತ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
ಮಡಿವಾಳನಗರದಲ್ಲಿ ಸತತವಾಗಿ ಸುರಿದ ಧಾರಾಕಾರ ಮಳೆಗೆ ಮರವೊಂದು ಧರೆಗೆ ಉರುಳಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಸ್ವಲ್ಪ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಅಧಿಕ ಸಮಯ ಸುರಿದ ಗಾಳಿ ಸಹಿತ ಮಳೆ ಸುರಿದಿದೆ.

ಬೆಂಗೇರಿ ಖಾದಿ ಗ್ರಾಮೋದ್ಯೋಗದ ಬಳಿ ಮನೆಯ ಮೇಲೆ ಮರ ಬಿದ್ದು, ಬಾಲಕಿಯೊಬ್ಬಳ ಕೈ ಬೆರಳಿಗೆ ಗಾಯವಾಗಿದೆ. ಸಂಜೆ ವೇಳೆ ಸುರಿದ ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮಹ್ಮದ ಸಾಬ್ ನದಾಫ್ ಹಾಗೂ ಅಲಾಬಿ ನದಾಫ್ ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ.