ETV Bharat / state

ಹುಬ್ಬಳ್ಳಿಯಲ್ಲಿ ಮಳೆ ಅವಾಂತರ: ಹೋಟೆಲ್​ಗೆ ನುಗ್ಗಿದ ನೀರು - ಹುಬ್ಬಳ್ಳಿಯಲ್ಲಿ ಮಳೆ

ಹುಬ್ಬಳ್ಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹೋಟೇಲ್​ಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ನಷ್ಟವುಂಟಾಗಿದೆ.

ಹುಬ್ಬಳ್ಳಿಯಲ್ಲಿ ಮಳೆ ಅವಾಂತರ
ಹುಬ್ಬಳ್ಳಿಯಲ್ಲಿ ಮಳೆ ಅವಾಂತರ
author img

By

Published : Sep 3, 2020, 4:14 PM IST

ಹುಬ್ಬಳ್ಳಿ: ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹೋಟೆಲ್​ಗೆ ನೀರು ನುಗ್ಗಿ ಅಪಾರ ಪ್ರಮಾಣದ ದಿನಸಿ ವಸ್ತುಗಳ ಹಾನಿಯಾಗಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ‌.

ಹೋಟೆಲ್​ ಮಾಲೀಕರು ಕಳೆದ 10 ವರ್ಷಗಳಿಂದ ಇಂತಹ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಸರಾಗವಾಗಿ ಮಳೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಪ್ರತಿ ಸಾರಿ ಮಳೆ ಸಂಕಷ್ಟಪಡುವಂತಾಗಿದೆ.

ಹುಬ್ಬಳ್ಳಿಯಲ್ಲಿ ಮಳೆ ಅವಾಂತರ

ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಪಾಲಿಕೆ ಗಮನಕ್ಕೆ ತಂದರೂ ಸಹ ಪ್ರಯೋಜನವಾಗಿಲ್ಲ. ಇನ್ನು ಕೊರೊನಾ ಸಂದರ್ಭದಲ್ಲಿ ನಾಲ್ಕು ತಿಂಗಳಿಂದ ವ್ಯಾಪಾರ ಇಲ್ಲದೇ ಪರದಾಟ ನಡೆಸಿದ್ದರು. ಆದ್ರೆ ಈಗ ಲಾಕ್​ಡೌನ್ ಆದೇಶ ಹಿಂಪಡೆದ ಸರಕಾರ ಹೋಟೆಲ್ ನಡೆಸಲು ಅವಕಾಶ ನೀಡಿದೆ. ಇನ್ನಾದರೂ ಉತ್ತಮ ವ್ಯಾಪಾರ ನಡೆಸಬೇಕು ಅಂದುಕೊಂಡ ಹೊಟೇಲ್​ ಮಾಲೀಕರಿಗೆ ಮಳೆ ಆಘಾತ ನೀಡಿದೆ. ಮಳೆ ಅವಾಂತರದಿಂದ ಸುಮಾರು 50000ಕ್ಕೂ ಅಧಿಕ ನಷ್ಟವಾಗಿದೆ ಎನ್ನುತ್ತಾರೆ ವ್ಯಾಪಾರಸ್ಥರು.

ಇದೇ ರೀತಿ ನಗರದ ಗಬ್ಬೂರ ಕ್ರಾಸ್ ರಿಲಯನ್ಸ್ ಮಾರ್ಕೆಟ್ ಬಳಿ ಇರುವ ಸಣ್ಣ ಹೋಟೆಲ್​ಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ವೀರಭದ್ರಪ್ಪ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.