ಹುಬ್ಬಳ್ಳಿ: ಲಾಕ್ಡೌನ್ ಸಡಿಲಿಕೆಯಾಗುತ್ತಿದಂತೆ ವಾಣಿಜ್ಯ ನಗರಿಯಲ್ಲಿ ವಾಹನ ಸಂಚಾರ ದಟ್ಟವಾಗಿದೆ.
ನಗರದ ಮಾರ್ಕೆಟ್ ಪ್ರದೇಶ ಹಾಗೂ ಸ್ಟೇಷನ್ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಫುಟ್ಪಾತ್ಗಳಲ್ಲಿ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡುತ್ತಿದ್ದಾರೆ.
ಈ ಬಗ್ಗೆ ತಿಳಿ ಹೇಳಬೇಕಾದ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನು ಕೆಲವು ಕಡೆ ರಸ್ತೆಯ ಮಧ್ಯದಲ್ಲಿಯೇ ವಾಹನಗಳನ್ನು ಪಾರ್ಕ್ ಮಾಡಿರುವ ದೃಶ್ಯಗಳು ಸಾಮಾನ್ಯವಾಗಿದ್ದು, ಸಂಚಾರಿ ಪೊಲೀಸರು ಎಲ್ಲೆಂದರಲ್ಲಿ ಪಾರ್ಕ್ ಮಾಡುವವರಿಗೆ ಬಿಸಿ ಮುಟ್ಟಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.