ETV Bharat / state

ಉಣಕಲ್ ಕೆರೆಗೆ 'ಚನ್ನಬಸವ ಸಾಗರ' ಎಂದು ನಾಮಕರಣ ಮಾಡುವಂತೆ ಹೈಕೋರ್ಟ್ ಆದೇಶ

ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

high-court-orders-naming-unkal-lake-as-channabasava-sagara
ಉಣಕಲ್ ಕೆರೆಗೆ 'ಚನ್ನಬಸವ ಸಾಗರ' ಎಂದು ನಾಮಕರಣ ಮಾಡುವಂತೆ ಹೈಕೋರ್ಟ್ ಆದೇಶ
author img

By

Published : Aug 18, 2021, 2:07 PM IST

ಹುಬ್ಬಳ್ಳಿ: ನಗರದ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕೆಂದು ಹೈಕೋರ್ಟ್ ಮಹಾನಗರ ಪಾಲಿಕೆಗೆ ಮಹತ್ವದ ಸೂಚನೆ ನೀಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಹಿಂದೆಯೇ ನಿರ್ಣಯ ಅಂಗೀಕರಿಸಿದ್ದರೂ, ಜಾರಿಗೆ ತರಲು ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.

ಕೆರೆ ಹೆಸರಿನ ಹಿನ್ನೆಲೆ:

ಉಣಕಲ್ ಕೆರೆ ದಂಡೆಯ ಮೇಲಿರುವ ಶ್ರೀ ಸಾವಿರಾರು ಚನ್ನಬಸವೇಶ್ವರ ದೇವಸ್ಥಾನಕ್ಕೆ ಭಕ್ತರು ಪ್ರತಿ ವರ್ಷ ಆಗಮಿಸುತ್ತಾರೆ. ಪ್ರತಿ ವರ್ಷ ಭಾರತ ಹುಣ್ಣಿಮೆಯಂದು ಜಾತ್ರೆ, ರಥೋತ್ಸವ ಹಾಗೂ ಶ್ರಾವಣ ಮಾಸದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ನಡೆದ ನಂತರ ಚನ್ನಬಸವೇಶ್ವರರ ನೇತೃತ್ವದ ಶರಣರ ತಂಡವು ಸಹ್ಯಾದ್ರಿಯ ಅರಣ್ಯ ಪ್ರದೇಶದ ಮಧ್ಯದ ಉಳವಿಯತ್ತ ಸಾಗಿತು. ಈ ಮಧ್ಯೆ ಅವರು ಉಣಕಲ್​ ಕೆರೆ ದಂಡೆ ಮೇಲೆ ಕೆಲಕಾಲ ಉಳಿದು ಜನರಲ್ಲಿ ಜಾಗೃತಿ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಉಣಕಲ್​ ಕೆರೆ ದಂಡೆಯ ಮೇಲೆ ರೂಪಗೊಂಡಿರುವ ದೇವಸ್ಥಾನ ಬಸವ ಭಕ್ತರ ಪವಿತ್ರ ಯಾತ್ರಾ ಸ್ಥಳವಾಗಿದೆ.

ಈ ಎಲ್ಲ ಕಾರಣಗಳಿಂದ ಚನ್ನಬಸವ ಸಾಗರ ಎಂದು ನಾಮಕರಣ ಮಾಡಲು 2003ರ ಜನವರಿ 16ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ನಿರ್ಣಯ ಜಾರಿಯಾಗದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶಂಕ್ರಗೌಡ ಪಾಟೀಲ, ವಿನಯ ಪರಮಾದಿ, ಶಿವಪ್ಪ ಪಟ್ಟಣಶೆಟ್ಟಿ ಅವರು ಸೇರಿ 7 ಜನರು ನ್ಯಾಯಾಲಯದ ಮೊರೆ ಹೋಗಿದ್ದರು. ಇವರ ಪರವಾಗಿ ವಕೀಲ ಕೆ.ಎಸ್. ಕೋರಿಶೆಟ್ಟರ್ ವಾದ ಮಂಡಿಸಿದ್ದರು. ಇದೀಗ ಹೈಕೋರ್ಟ್ ಮಹಾನಗರ ಪಾಲಿಕೆಗೆ ಚನ್ನಬಸವ ಸಾಗರ ಹೆಸರಿಡಲು ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬರೆ: ಅಡುಗೆ ಸಿಲಿಂಡರ್‌ ಬೆಲೆಯಲ್ಲಿ 25 ರೂ.ಏರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.