ETV Bharat / state

ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ನಡೆದ ಗಲಾಟೆ ಬಗ್ಗೆ ದಾಖಲಾದ ಎಫ್​ಐಆರ್​ಗೆ ಹೈಕೋರ್ಟ್​ ತಡೆ - etv bharat kannada

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 13 ಮಂದಿ ವಿರುದ್ಧ ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ.

high-court-stays-fir-regarding-clash-during-siddaramaiah-visit-to-madikeri
ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ನಡೆದ ಗಲಾಟೆ ಬಗ್ಗೆ ದಾಖಲಾದ ಎಫ್​ಐಆರ್​ಗೆ ಹೈಕೋರ್ಟ್​ ತಡೆ
author img

By

Published : Sep 28, 2022, 9:49 PM IST

Updated : Sep 28, 2022, 11:04 PM IST

ಬೆಂಗಳೂರು: ಪ್ರವಾಹದ ಪರಿಸ್ಥಿತಿ ಪರಿಶೀಲನೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಡಿಕೇರಿ ನಗರ ಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಎಂಬುವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಲ್ಲಿ ಕಾಂಗ್ರೆಸ್​ ಮುಖಂಡರಾದ ವೀಣಾ ಅಚ್ಚಯ್ಯ ಸೇರಿದಂತೆ 13 ಮಂದಿ ವಿರುದ್ಧ ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಮಡಿಕೇರಿ ಟೌನ್ ಪೋಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಚಂದ್ರಶೇಖರ್, ವೀಣಾ ಅಚ್ಚಯ್ಯ ಹಾಗೂ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಸೇರಿದಂತೆ ಕಾಂಗ್ರೆಸ್‌ನ 13 ನಾಯಕರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರಕರಣ ಕುರಿತ ಅರ್ಜಿದಾರರ ವಿರುದ್ಧದ ಎಫ್‌ಐಆರ್ ಮತ್ತು ಮಡಿಕೇರಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಅಲ್ಲದೆ, ಮಡಿಕೇರಿ ಟೌನ್ ಠಾಣಾ ಪೊಲೀಸರು ಮತ್ತು ದೂರುದಾರರಾದ ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಅನಿತಾ ಪೂವಯ್ಯ ತಮ್ಮ ಅವಧಿಯಲ್ಲಿ ಎಷ್ಟು ಸಾರ್ವಜನಿಕ ಶೌಚಾಲಯಗಳಿಗೆ ಭೇಟಿ ನೀಡಿದ್ದು, ಜೊತೆಗೆ, ಯಾವ ಕ್ರಮಗಳನ್ನು ಕೈಗೊಂಡಿದ್ದರು ಎಂಬುದರ ಕುರಿತು ಮುಂದಿನ ವಿಚಾರಣೆ ವೇಳೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ದೂರುದಾರರಿಗೆ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ ಏನು?: ನಗರಸಭೆ ಉಪಾಧ್ಯಕ್ಷರು, ಸದಸ್ಯರು ಸ್ಥಾಯಿ ಸಮಿತಿ ಅಧ್ಯಕ್ಷರು ಜೊತೆಗೂಡಿ ಕಳೆದ ಆ.18ರಂದು ಮಡಿಕೇರಿ ನಗರದ ಮೂರ್ನಾಡು ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಅಶುಚಿತ್ವದ ಬಗ್ಗೆ ವೀಕ್ಷಿಸಲು ತೆರಳುತ್ತಿದ್ದಾಗ ಜಿ.ಟಿ. ವೃತ್ತದ ಬಳಿ ಪೊಲೀಸರು ತಡೆದು ಮುಂದಕ್ಕೆ ತೆರಳದಂತೆ ಸೂಚಿಸಿದರು. ಕಾರಣ ಕೇಳಿದ್ದಕ್ಕೆ ಈ ರಸ್ತೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬರುತ್ತಿರುವ ಕಾರಣ ಸಂಚಾರ ತಡೆಹಿಡಿಯಲಾಗಿದೆ ಎಂದು ತಿಳಿಸಿದರು.

ಅದೇ ಸಂದರ್ಭದಲ್ಲಿ ಮಂಗಳೂರು ರಸ್ತೆಯಿಂದ ಜಿ.ಟಿ. ವೃತ್ತದ ಕಡೆಗೆ ಮೆರವಣಿಗೆಯಲ್ಲಿ ಬಂದ ಅರ್ಜಿದಾರರು ತಮ್ಮನ್ನು ಕಂಡು ಅಕ್ರಮ ಕೂಟ ಕಟ್ಟಿಕೊಂಡು ಬಂದು ಹಲ್ಲೆ ಯತ್ನ ನಡೆಸಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದರು ಎಂದು ಆರೋಪಿಸಿ ಆ.19ರಂದು ದೂರು ನೀಡಿದ್ದರು.

ಅದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಮಡಿಕೇರಿ ಟೌನ್ ಪೊಲೀಸರು ಅಕ್ರಮ ಕೂಟ ಸೇರಿದ, ಅವಮಾನ ಉಂಟು ಮಾಡಿದ, ಗಲಭೆ ನಡೆಸಿದ ಆರೋಪದ ಸಂಬಂಧ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣವು ಮಡಿಕೇರಿಯ ಪ್ರಧಾನ ಸಿವಿಲ್​​ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ.

ಎಫ್‌ಐಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿರುವ ಅರ್ಜಿದಾರರು, ದೂರುದಾರರನ್ನು ತಾವು ತಡೆದಿಲ್ಲ. ಅವರನ್ನು ಪೊಲೀಸರೇ ತಡೆದರು. ನಾವೆಲ್ಲ ಮಳೆ ಹಾನಿ ಪ್ರದೇಶದ ಪರೀಶೀಲನೆ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆಗಿದ್ದೆವು. ಅವರ ಜೊತೆಗಿದ್ದರೆ ಅಕ್ರಮ ಕೂಟ ಸೇರಿದ ಅರ್ಥವಲ್ಲ. ಪ್ರವಾಸ ವೇಳೆ ಸಿದ್ದರಾಮಯ್ಯ ಕಾರು ಮೇಲೆ ಮೊಟ್ಟೆ ಎಸೆದವರ ವಿರುದ್ಧ ದೂರು ದಾಖಲಿಸಿದಕ್ಕೆ ಪ್ರತಿಯಾಗಿ ತಮ್ಮನ್ನು ಗುರಿಯಾಗಿಸಿಕೊಂಡು ದೂರು ನೀಡಿ ಕಿರುಕುಳ ನೀಡಲು ಉದ್ದೇಶಿಸಿದ್ದಾರೆ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶ ಪೂರ್ವಕವಾಗಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ

Last Updated : Sep 28, 2022, 11:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.