ಹುಬ್ಬಳ್ಳಿ: ಕೇಂದ್ರ ಬಜೆಟ್ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ ಹಲವಾರು ಮಹತ್ವ ಪೂರ್ಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಲವು ಕಾಮಗಾರಿಗಳು ಉತ್ತಮ ರೀತಿಯಲ್ಲಿ ನಡೆಯುತ್ತಿವೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಆಯೋಜಿಸಿದ್ದ ಬಜೆಟ್ ಪೂರ್ವ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಆವಿಷ್ಕಾರ ಹಾಗೂ ಹೊಸ ಚಿಂತನೆಗಳ ಮೂಲಕ ಯೋಜನೆ ಕೈಗೊಳ್ಳಲಾಗುತ್ತಿದೆ.
ಕೇಂದ್ರ ಬಜೆಟ್ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ ಹಲವಾರು ಮಹತ್ವ ಪೂರ್ಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಲವು ಕಾಮಗಾರಿಗಳು ಉತ್ತಮ ರೀತಿ ನಡೆಯುತ್ತಿವೆ ಎಂದು ತಿಳಿಸಿದರು. ಸಂವಾದದಲ್ಲಿ ಸಾರ್ವಜನಿಕರು, ರೈಲ್ವೆ ಹಾಗೂ ರಾಜ್ಯ ಸರ್ಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದೇ ವೇಳೆ ಸಚಿವರು, ಸಾರ್ವಜನಿಕರ ಹಾಗೂ ಅಧಿಕಾರಿಗಳ ಅಹವಾಲು ಸ್ವೀಕರಿಸಿದರು.