ಧಾರವಾಡ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಹಾಗೂ ಜನಾರ್ದನ ರಡ್ಡಿ ವಿರುದ್ಧ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಚಾರದ ಸಮಗ್ರ ಕಾಯ್ದೆ ಅನ್ವಯ ಸಾರ್ವಜನಿಕ ಜೀವನದಲ್ಲಿರುವ ಎಮ್ಎಲ್ಎಗಳು, ಎಮ್ಪಿಗಳ ಮೇಲೆ ಜಾರಿ ಮಾಡುವಂತಹ ಅಧಿಕಾರ ಇರುವುದು ಸಿಬಿಐಗೆ ಮಾತ್ರ. ಹಾಗಾಗಿ ಇದನ್ನು ಜಾರಿ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಟರಾವ್ ಪಾಸ್ ಮಾಡುವಂತೆ ಒತ್ತಾಯಿಸಿದರು.
ಭ್ರಷ್ಟಾಚಾರ ವಿರುದ್ಧ ಜನವರಿಯಲ್ಲಿ ಕಾಗಿನೆಲೆಯಿಂದ ಕೂಡಲಸಂಗಮವರೆಗೆ ಶರಣ ಸಂತರ ಬೃಹತ್ ಜಾಗೃತಿ ಜಾಥಾ ನಡೆಸುತ್ತಿರುವ ಕುರಿತು ಮಾಹಿತಿ ನೀಡಿದರು.