ಹುಬ್ಬಳ್ಳಿ: ಧಾರವಾಡದಲ್ಲಿ ಹೋಳಿ ಆಚರಣೆ ಹಿನ್ನೆಲೆಯಲ್ಲಿ ಹು-ಧಾ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಬಸ್ ಕಾರ್ಯಾಚರಣೆಯನ್ನು ನಾಳೆ (ಮಂಗಳವಾರ) ಸ್ಥಗಿತಗೊಳಿಸಲಾಗುವುದು ಎಂದು ಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಚಿಗರಿ ಬಸ್ ಸಂಚಾರದ ವ್ಯವಸ್ಥೆ ಸ್ಥಗಿತಗೊಳಿಸಲಾಗುತ್ತಿದ್ದು, ಬಣ್ಣದ ಕಾರ್ಯಕ್ರಮ ಮುಗಿದ ನಂತರದಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಿ.ಆರ್.ಟಿ.ಎಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.