ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯನ್ನು ನಾನು ಖಂಡಿಸಿದ್ದೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಸಚಿವ. ಅವರು ಗೃಹ ಸಚಿವರಾಗೋದಕ್ಕೆ ಅನ್‌ಫಿಟ್. ಕೂಡಲೇ ಗೃಹಮಂತ್ರಿ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಅನ್ನೋ ಬಿಜೆಪಿ ಅರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ನಾಯಕರಲ್ಲಿ ಸಾಕ್ಷಿ ಇದೆಯಾ ಎಂದು ಪ್ರಶ್ನಿಸಿದರು. ಕೆಲ ಸಂಘಟನೆಗಳನ್ನು ಬ್ಯಾನ್ ಮಾಡೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಧಮ್ ಇದ್ರೆ ಎಸ್ಡಿಪಿಐ, ಎಂಐಎಂ, ಆರ್ಎಸ್ಎಸ್, ಭಜರಂಗದಳ ಸೇರಿದಂತೆ ಕೆಲ ಸಂಘಟನೆಗಳನ್ನು ಬ್ಯಾನ್ ಮಾಡಲಿ. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಲಿ ಎಂದರು.
ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ವಾಸೀಂ ಪಠಾಣ್ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಪಿಎಸ್ಐ ನೇಮಕಾತಿ ಸಂಬಂಧ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ರೂ ಕೂಡಲೇ ಕ್ರಮ ಕೈಗೊಳ್ಳಬೇಕು. ಕಾನೂನಿನ ರೀತ್ಯ ಬಂಧನ ಮಾಡಬೇಕು. ಈ ಘಟನೆ ಜಾಮೀನು ರಹಿತ ಅಪರಾಧ ಎಂದು ಹೇಳಿದರು.