ETV Bharat / state

ಯಾವುದೇ ಕಾರಣಕ್ಕೂ ಭಾರತ್​ ಬಂದ್ ಯಶಸ್ವಿಯಾಗಲ್ಲ: ಆರಗ ಜ್ಞಾನೇಂದ್ರ - ಭಾರತ್​ ಬಂದ್

ಕೇಂದ್ರದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಸರ್ಕಾರ ಯಾವುದೇ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿಲ್ಲ. ಈ ಎಲ್ಲಾ ಕಾಯ್ದೆಯಿಂದ ರೈತ ಸಮುದಾಯಕ್ಕೆ ಲಾಭ ಆಗುತ್ತದೆ ಎಂದು ರೈತರು ಭಾರತ್​ ಬಂದ್​ಗೆ ಬೆಂಬಲ ನೀಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Home Minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Sep 27, 2021, 2:05 PM IST

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್​ ಬಂದ್ ಯಶಸ್ವಿಯಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಸರ್ಕಾರ ಯಾವುದೇ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿಲ್ಲ. ಈ ಎಲ್ಲ ಕಾಯ್ದೆಯಿಂದ ರೈತ ಸಮುದಾಯಕ್ಕೆ ಲಾಭ ಆಗುತ್ತದೆ ಎಂದು ರೈತರು ಭಾರತ್​ ಬಂದ್​ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.

ಬಂದ್​ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಇನ್ನು ಆನ್​ಲೈನ್ ಜೂಜಾಟದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಆನ್​ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇತಿಹಾಸದಲ್ಲಿಯೇ ಇದೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಯಾವುದೇ ಆನ್​ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಪೊಲೀಸ್ ಇಲಾಖೆ ವರ್ಗಾವಣೆಯನ್ನು ಜಿಲ್ಲಾ ಮಟ್ಟಕ್ಕೆ ತರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.