ಧಾರವಾಡ : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಮತ್ತೆ ಲಾಕ್‌ಡೌನ್ ಘೋಷಿಸುವ ವಿಚಾರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದರೆ, ಕೊರೊನಾ ನಿಯಂತ್ರಿಸಲು ಪರಿಣಿತರ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಿಗೆ ರಜೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪರಿಣಿತರ ಸಮಿತಿಯ ಶಿಫಾರಸಿನಂತೆ ಆರೋಗ್ಯ, ಶಿಕ್ಷಣ ಇಲಾಖೆಯವರೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು. ಬೇರೆ ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಯಾ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಅವರು ನಿರ್ಧಾರ ಮಾಡಿದ್ದಾರೆ ಎಂದರು.
ಎಸ್‌ಐಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತೆ ಎಂಬ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, 2016ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು. ಆಗ ಸಿಐಡಿ ವಿಚಾರಣೆ ನಡೆಸಿತ್ತು. ಪೊಲೀಸರು ಕಾನೂನು ಪ್ರಕಾರ ವಿಚಾರಣೆ ಮಾಡುತ್ತಾರೆ.
ನಿಷ್ಪಕ್ಷಪಾತವಾಗಿ, ನ್ಯಾಯಸಮ್ಮತವಾಗಿ ತನಿಖೆ ನಡೆಸಲಾಗುತ್ತೆ. ಎಸ್‌ಐಟಿಯನ್ನು ಸ್ವತಂತ್ರವಾಗಿ ಬಿಟ್ಟಿದ್ದೇವೆ. ಬೇರೆ ಎಜೆನ್ಸಿಗೆ ತನಿಖೆಗೆ ಕೊಡೋ ಅವಶ್ಯಕತೆಯಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.
ಓದಿ: ತಮಿಳುನಾಡು ಯೋಜನೆ ಪ್ರಶ್ನಿಸಿ ಸುಪ್ರೀಂನಲ್ಲಿ ಒರಿಜಿನಲ್ ಸೂಟ್ ಸಲ್ಲಿಸಲು ನಿರ್ಧಾರ: ಬೊಮ್ಮಾಯಿ