ಹುಬ್ಬಳ್ಳಿ: ಔರಾದ್ಕರ್ ವರದಿಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿದ ನಂತರ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಗೃಹ ಇಲಾಖೆಯ ಅಧಿಕಾರ ವಹಿಸಿಕೊಂಡ ಬಳಿಕ ಮೂರು ದಿನ ಸಭೆ ನಡೆಸಿದ್ದೇನೆ. ಪೊಲೀಸರು ಸಾಮಾನ್ಯ ಜನರ ಜೊತೆ ಸೌಹಾರ್ದತೆಯಿಂದ ಇರಲು ಸೂಚನೆ ನೀಡಿದ್ದೇನೆ. ಹಾಡ್೯ ಕೋರ್ ಕ್ರಿಮಿನಲ್ಗಳ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ಮೋಹರಂ, ಗಣೇಶ್ ಚತುರ್ಥಿಯನ್ನ ಶಾಂತಿಯುತವಾಗಿ ಆಚರಣೆ ಮಾಡಲು ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ. ಔರಾದ್ಕರ್ ವರದಿಯನ್ನು ಯಥಾವತ್ತು ಜಾರಿ ಮಾಡಿದ್ರೆ ಹಲವರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಇದರೊಂದಿಗೆ ವರದಿಯಲ್ಲಿ ಬಂಧಿಖಾನೆ ಹಾಗೂ ಅಗ್ನಿಶಾಮಕ ಇಲಾಖೆ ಸೇರ್ಪಡೆಯಾಗಿಲ್ಲ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ವರದಿಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿದ ನಂತರ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ
ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವರು, ಆ ಪ್ರಕರಣ ಇಡಿ ವ್ಯಾಪ್ತಿಗೆ ಬರುವುದರಿಂದ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಪೋನ್ ಕದ್ದಾಲಿಕೆ ಪ್ರಕರಣ ಈಗಾಗಲೇ ಸಿಬಿಐಗೆ ವಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದಷ್ಟೇ ಹೇಳಿದರು.