ಧಾರವಾಡ: ವಿದ್ಯಾರ್ಥಿಗಳು ಸೇರಿದಂತೆ ವೃದ್ಧರೊಬ್ಬರು ಹೆಜ್ಜೇನು ದಾಳಿಗೆ ತುತ್ತಾದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸಂಭವಿಸಿದೆ.
ಐವರು ವಿದ್ಯಾರ್ಥಿಗಳು ಸೇರಿ ಒಟ್ಟು 6 ಮಂದಿಯ ಮೇಲೆ ಹೆಜ್ಜೇನು ದಾಳಿ ಮಾಡಿದೆ. ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಸನಗೌಡ ಪಾಟೀಲ್ ಎಂಬ ವೃದ್ದನಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಅವರು ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೇನುಗೂಡಿಗೆ ಕಿಡಿಗೇಡಿಗಳು ಕಲ್ಲೆಸೆದಿದ್ದರಿಂದ ರೊಚ್ಚಿಗೆದ್ದಿರುವ ಹೆಜ್ಜೇನುಗಳು ದಾಳಿ ನಡೆಸಿವೆ ಎನ್ನಲಾಗಿದೆ.
ಇಂದು ಭಾನುವಾರವಾಗಿದ್ದರಿಂದ ವಿಶ್ವವಿದ್ಯಾಲಯಕ್ಕೆ ರಜೆ ಇದ್ದ ಕಾರಣ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿ ಹೋಗಿದೆ.