ಕಲಘಟಗಿ: ಗ್ರಾಮದ ಅಭಿವೃದ್ಧಿಯ ವಿಷಯದಲ್ಲಿ ಎಲ್ಲ ನೂತನ ಸದಸ್ಯರು ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು ಒಗ್ಗಟ್ಟಾಗಿ ಶ್ರಮ ವಹಿಸಿ ತಮ್ಮ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ತಿಳಿಸಿದರು.
ಪಟ್ಟಣದ ಹನ್ನೆರಡು ಮಠದ ಆವರಣದಲ್ಲಿ ತಾಲೂಕು ಬಿಜೆಪಿ ಪಕ್ಷದಿಂದ ಆಯೋಜಿಸಲಾಗಿದ್ದ ನೂತನ ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಲಿಂಬಿಕಾಯಿ ಭಾಗವಹಿಸಿ ಮಾತನಾಡಿದರು. ಗ್ರಾಮದ ಅಭಿವೃದ್ಧಿಯೆಡೆಗೆ ಗಮನ ಹರಿಸಿ ಎಂದರು.
ಈ ಸುದ್ದಿಯನ್ನೂ ಓದಿ: ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ: ಶಾಸಕ ಎಂ.ಪಿ. ಕುಮಾರಸ್ವಾಮಿ
ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿ, ನೂತನವಾಗಿ ಆಯ್ಕೆಯಾದ ಸದಸ್ಯರು ತಮ್ಮ ಗ್ರಾಮಗಳಲ್ಲಿ ಜನರ ನಡುವೆ ಇದ್ದು ಕೆಲಸ ನಿರ್ವಹಿಸಿ. ಸರ್ಕಾರದಿಂದ ಗ್ರಾಮಗಳ ಅಭಿವೃದ್ಧಿಗೆ ಲಕ್ಷಾಂತರ ಅನುದಾನ ಹರಿದು ಬರುತ್ತದೆ. ಎಲ್ಲರೂ ಅದನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು.