ETV Bharat / state

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್​ ಸವಾರರು ಸಾವು - ಭೀಕರ ರಸ್ತೆ ಅಪಘಾತ ಇಬ್ಬರು ಬೈಕ್​ ಸವಾರರು ಸಾವು

ಬೈಕ್ ಸವಾರರಿಗೆ ವಾಹನವೊಂದು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.

Horrific road accident Death two bike riders in Dharwad
ಭೀಕರ ರಸ್ತೆ ಅಪಘಾತ
author img

By

Published : Jun 20, 2021, 9:13 AM IST

ಧಾರವಾಡ: ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಹೊಯ್ಸಳನಗರದಲ್ಲಿ ತಡರಾತ್ರಿ ಸಂಭವಿಸಿದೆ.

ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿವೆ. ಮೃತರ ಗುರುತು ಕೂಡ ಸಿಗದ ಸ್ಥಿತಿಯಲ್ಲಿ ದೇಹಗಳು ಪತ್ತೆಯಾಗಿವೆ. ಘಟನೆ ನಡೆದ ತಕ್ಷಣವೇ ವಾಹನ ಸವಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೇಹದ ಭಾಗಗಳನ್ನು ಆಯ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ವಾಹನದ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.