ಹುಬ್ಬಳ್ಳಿ: ಲಾಕ್ಡೌನ್ ನಿಯಮವನ್ನು ನಿನ್ನೆಯಿಂದ ವಾಣಿಜ್ಯ ನಗರಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಪರಿಣಾಮ ನಗರದ ಹರ್ಷಾ ಕಾಂಪ್ಲೆಕ್ಸ್ ಎರಡನೇ ಮಹಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಲ್ಲಿ ಹಣ ತೆಗೆದುಕೊಳ್ಳಲು ಜನರು ಮುಗಿಬಿದ್ದಿದ್ದಾರೆ.
ನಗರದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಕೂಡಾ ಜನರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.
ಕೊರೊನಾ ವೈರಸ್ ಹರಡದಂತೆ ನಗರದಲ್ಲಿ ಸೀಲ್ ಡೌನ್ ಪ್ರದೇಶವನ್ನು ಹೊರತುಪಡಿಸಿ ಉಳಿದ ಪ್ರದೇಶವನ್ನು ಫ್ರೀ ಝೋನ್ ಮಾಡಿದ್ದಾರೆ. ಹೀಗಾಗಿ ಜನರು ಮನೆಯಿಂದ ಹೊರ ಬಂದು ಜಮಾಯಿಸುತ್ತಿದ್ದಾರೆ.