ETV Bharat / state

ರಾಜ್ಯ ಬಜೆಟ್: ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡ ಅವಳಿ‌ ನಗರದ‌ ಮಂದಿ - ಈಟಿವಿ ಭಾರತ್ ಕನ್ನಡ ಸುದ್ದಿ

ಶುಕ್ರವಾರದಂದು ಸರ್ಕಾರದ ಬಜೆಟ್​ ಮಂಡನೆಯಾಗಲಿದೆ. ಹೀಗಾಗಿ, ಅವಳಿನಗರದ ಜನ ಬಜೆಟ್​ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಹೊಂದಿದ್ದಾರೆ.

ಹುಬ್ಬಳ್ಳಿ
ಹುಬ್ಬಳ್ಳಿ
author img

By

Published : Jul 6, 2023, 8:24 PM IST

Updated : Jul 6, 2023, 8:31 PM IST

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಿನಯ ಜವಳಿ ಅವರು ಬಜೆಟ್ ಬಗ್ಗೆ ಮಾತನಾಡಿದ್ದಾರೆ

ಹುಬ್ಬಳ್ಳಿ: ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಚೊಚ್ಚಲ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಧಾರವಾಡ ಜಿಲ್ಲೆ ಹಾಗೂ ಅವಳಿ ನಗರದ ಅಭಿವೃದ್ಧಿಗೆ ಯಾವ ಕೊಡುಗೆಗಳು ಸಿಗಲಿವೆ. ಹೆಚ್ಚಿನ ಅನುದಾನ ಸಿಗುವುದೇ ಎಂಬ ನಿರೀಕ್ಷೆಗಳು ಗರಿಗೆದರಿವೆ.

ರಾಜಧಾನಿ ಬೆಂಗಳೂರು ಬಿಟ್ಟರೆ ಅತೀ ವೇಗವಾಗಿ ಬೆಳೆಯುತ್ತಿರುವ ಹಾಗೂ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಗಳಿಸಿರುವ ನಗರಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಅವಶ್ಯಕತೆ ಇದೆ. ಇದರ ಜೊತೆಗೆ ಮಹಾನಗರದಲ್ಲಿ ಹಾಗೂ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳು ಸ್ಥಾಪನೆ ಆಗಿಲ್ಲ‌. ಹೀಗಾಗಿ ನೂತನ ಕೈಗಾರಿಕೆ ಸ್ಥಾಪನೆ ಮಾಡುವ ಮೂಲಕ ನಿರುದ್ಯೋಗ ನಿರ್ಮೂಲನೆಗೆ ಒತ್ತು ನೀಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.

ನಾಲ್ಕು ಟ್ರಕ್ ಟರ್ಮಿನಲ್ ಸ್ಥಾಪಿಸಬೇಕು : ಇನ್ನು ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಇನ್ಪೋಸಿಸ್ ಕಂಪನಿ ಬೃಹತ್ ಕಟ್ಟಡ ಕಟ್ಟಿದೆ. ಆದರೆ ಕಾರ್ಯಾರಂಭ ಮಾಡಲು ಸರ್ಕಾರ ಮಾತುಕತೆ ನಡೆಸಬೇಕು. ನಗರದ ಪ್ರಮುಖ ರಸ್ತೆ ಸಂಪರ್ಕ ಕಲ್ಪಿಸುವಲ್ಲಿ ಟ್ರಕ್ ಟರ್ಮಿನಲ್ ಮಾಡಬೇಕಿದೆ. ಕೇವಲ ಗಬ್ಬೂರು ಟ್ರಕ್ ಟರ್ಮಿನಲ್ ಜೊತೆಗೆ ನಗರದ ಪ್ರಮುಖ ನಗರ ಪ್ರವೇಶಿಸುವ ಕಡೆ ನಾಲ್ಕು ಟ್ರಕ್ ಟರ್ಮಿನಲ್ ಸ್ಥಾಪಿಸಬೇಕು ಎಂಬ ಒತ್ತಾಯವಿದ್ದು, ಈ ಬಜೆಟ್​ನಲ್ಲಿ ಅದಕ್ಕೆ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: 6ನೇ ಗ್ಯಾರಂಟಿ ಯೋಜನೆ ಈ ಬಜೆಟ್​ನಲ್ಲೇ ಅನುಷ್ಠಾನಕ್ಕೆ ತನ್ನಿ: ಬೆಳಗಾವಿ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಕಾರ್ಖಾನೆ ಸ್ಥಾಪನೆಗೆ ಜಾಗ ಮೀಸಲಿಡುವ ನಿರೀಕ್ಷೆ: ಹುಬ್ಬಳ್ಳಿ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ತೆಗೆದುಕೊಳ್ಳುವುದರ ಜೊತೆಗೆ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೊಸ ಹೊಸ ಕಾರ್ಖಾನೆ ಸ್ಥಾಪನೆಗೆ ಜಾಗ ಮೀಸಲಿಡುವ ನಿರೀಕ್ಷೆ ಇದೆ. ನೀರಾವರಿಗೆ ಸಂಬಂಧಿಸಿದಂತೆ ಕಳಸಾ ಬಂಡೂರಿ ಯೋಜನೆಗೆ ಅನುದಾನ ಮೀಸಲಿಡುವುದು. ಹುಬ್ಬಳ್ಳಿ - ಅಂಕೋಲಾ‌ ರೈಲ್ವೆ ಯೋಜನೆ ಅನುದಾನ ಮೀಸಲಿಡುವುದು. ಉತ್ತರ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Budget 2023: ನಾಳೆ ಬಜೆಟ್‌- ಬೆಳಗಾವಿ ರೈತರ ಬೇಡಿಕೆ ಈಡೇರಿಸುತ್ತಾ ಸರ್ಕಾರ?

ಇದೆಲ್ಲದರ ಜೊತೆಗೆ ಸರ್ಕಾರ ವಿದ್ಯುತ್ ದರ ಪರಿಷ್ಕರಣೆ ಮಾಡುವ ಮೂಲಕ ಉದ್ಯಮಿಗಳ ನೆರವಿಗೆ ಬರಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಿನಯ ಜವಳಿ ಹೇಳಿದ್ದಾರೆ. ಈ ಬಗ್ಗೆ ಹಲವು ಅಂಶಗಳ ಬಗ್ಗೆ‌ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್​ನಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌

ಇದನ್ನೂ ಓದಿ: 7ನೇ ವೇತನ ಆಯೋಗದ ವರದಿ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಖಾಲಿ ಹುದ್ಧೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

Last Updated : Jul 6, 2023, 8:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.