ಹುಬ್ಬಳ್ಳಿ: ಚಂದ್ರಶೇಖರ ಗುರೂಜಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತನಿಖಾ ತಂಡಗಳನ್ನು ರಚನೆ ಮಾಡಿದ್ದು, ತನಿಖೆಯ ನಂತರವೇ ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಎಲ್ಲಾ ಹಂತದಲ್ಲಿಯೂ ಕೂಡ ತನಿಖೆ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದರು.
ಉಣಕಲ್ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ನಲ್ಲಿ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನದ ವೇಳೆಗೆ ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೋಟೆಲ್ನಲ್ಲಿ ಯಾರೋ ಇಬ್ಬರು ಚಂದ್ರಶೇಖರ ಗುರೂಜಿ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದರು.
ಕೊಲೆಯ ತನಿಖೆಗೆ ಐದು ತಂಡಗಳನ್ನು ರಚನೆ ಮಾಡಿದ್ದು, ಎಲ್ಲ ಆಯಾಮಗಳಲ್ಲಿಯೂ ಕೂಡ ತನಿಖೆ ನಡೆಸಲಾಗುತ್ತಿದೆ. ಈಗ ಯಾರನ್ನು ವಶಕ್ಕೆ ಪಡೆದಿಲ್ಲ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಕೊಲೆ ಮಾಡಿದವರ ಬಗ್ಗೆ ಎಲ್ಲ ರೀತಿಯಲ್ಲಿಯೂ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ತನಿಖೆಯ ನಂತರವೇ ಮಾಹಿತಿ ಲಭ್ಯವಾಗಬೇಕಿದೆ ಎಂದು ಅವರು ತಿಳಿಸಿದರು.
ಓದಿ: ರಾಜ್ಯದ ಹಲವೆಡೆ ಮುಂದುವರಿದ ಮಳೆ ಅಬ್ಬರ.. ನೆರೆ ಭೀತಿಯಲ್ಲಿ ನದಿ ತೀರದ ಜನ