ಹುಬ್ಬಳ್ಳಿ: ಅದು ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿರುವ ಪಾಲಿಕೆ. ಏನೇನೋ ಯೋಜನೆ ಜಾರಿಗೆ ತಂದು ಸ್ಮಾರ್ಟ್ ಆಗುತ್ತಿರುವ ಈ ಪಾಲಿಕೆಯಲ್ಲಿ ಬಹುದೊಡ್ಡ ಅವ್ಯವಸ್ಥೆ ತಲೆದೋರಿದೆ, ಆದರೆ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ನಿರ್ವಹಣೆ ಹೆಸರಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಹೆಸರಲ್ಲಿ ಸರ್ಕಾರದ ಹಣವನ್ನು ಪೋಲು ಮಾಡುತ್ತಿದೆ. ಜನಪರ ಕಾಳಜಿ ತೋರುವ ಪಾಲಿಕೆ ಜನರ ಆರೋಗ್ಯಕ್ಕೆ ಮಾರಕವಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿತ್ಯ ನಗರದ ವಿವಿಧ ವಾರ್ಡ್ಗಳಿಂದ ಸಂಗ್ರಹಿಸಿದ ಹತ್ತಾರು ಟನ್ ಕಸ ಸಂಗ್ರಹಣೆಯಾಗುತ್ತಿದೆ. ಆದರೆ ವೈಜ್ಞಾನಿಕವಾಗಿ ನಿರ್ವಹಿಸುವ ಕಾರ್ಯವಾಗುತ್ತಿಲ್ಲ.
ಇನ್ನೂ ವ್ಯವಸ್ಥಿತವಾಗಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಇದರಿಂದ ಗೊಬ್ಬರ ತಯಾರಿಸಿ ರೈತರಿಗೆ ಮಾರಾಟ ಮಾಡಿ ಆದಾಯ ಗಳಿಸಿದೆ ಎಂದು ಪಾಲಿಕೆ ಆಯುಕ್ತರು ಹೇಳುತ್ತಾರೆ. ಆದರೆ ಇಲ್ಲಿ ಸಂಗ್ರಹಿಸಿದ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರು ಯಾರು ಎಂಬಂತ ಪ್ರಶ್ನೆ ಸಹಜವಾಗಿಯೇ ಹುಟ್ಟಿಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವ ಭರವಸೆಯನ್ನು ಆಯುಕ್ತರು ನೀಡಿದ್ದಾರೆ.
ಒಟ್ಟಿನಲ್ಲಿ ಸರ್ಕಾರದ ಹಣವನ್ನು ಹೀಗೆ ಅರ್ಥವಿಲ್ಲದ ವ್ಯರ್ಥ ಮಾಡುವುದಕ್ಕೆ ಕಡಿವಾಣ ಬೀಳಬೇಕಿದೆ. ಜನರ ಜೀವಕ್ಕೆ ಮಾರಕವಾದ ತ್ಯಾಜ್ಯ ಸುಡುವ ಕಾರ್ಯಕ್ಕೆ ಬ್ರೇಕ್ ಹಾಕಲು ಆಯುಕ್ತರು ನಿರ್ಧಾರ ಕೈಗೊಳ್ಳುವವರೇ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು : ಸಿಎಂ ಬೊಮ್ಮಾಯಿ