ETV Bharat / state

ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಪ್ಲ್ಯಾನ್ : ಹೊಸ ಕಾರ್ಯದತ್ತ ಮುನ್ನಡೆಯುತ್ತಿದೆ ಅವಳಿನಗರ

ಕಟ್ಟಡ ತ್ಯಾಜ್ಯಗಳ ನಿರ್ವಹಣೆಗೆ ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ಜಾಗ ಗುರುತು ಮಾಡುವ ಮೂಲಕ ಎಲ್ಲೆಂದರಲ್ಲಿ ಹಾಕಲಾಗುತ್ತಿರುವ ತ್ಯಾಜ್ಯ ನಿಯಂತ್ರಣಕ್ಕೆ ಮುಂದಾಗಿದೆ.

Hubli Dharwad Municipal Corporation
ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಪ್ಲ್ಯಾನ್
author img

By

Published : Aug 23, 2022, 9:07 PM IST

ಹುಬ್ಬಳ್ಳಿ : ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಎಸೆಯುವುದನ್ನು ತಪ್ಪಿಸಲು ಮತ್ತು ಅದರಿಂದಾಗುವ ತೊಂದರೆಗಳನ್ನು ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ಯೋಜನೆಯನ್ನು ರೂಪಿಸಿದೆ. ಧಾರವಾಡ ತಾಲ್ಲೂಕಿನ ಶಿವಳ್ಳಿಯಲ್ಲಿ ಕಟ್ಟಡ ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಿಸಲು ಮುಂದಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ದಿನ ಅಂದಾಜು 100 ಟನ್‌ಗಿಂತಲೂ ಹೆಚ್ಚು ಕಟ್ಟಡ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಕಟ್ಟಡಗಳನ್ನು ನಿರ್ಮಿಸುವಾಗ ಮತ್ತು ಹಳೆಯ ಕಟ್ಟಡಗಳನ್ನು ನೆಲಸಮ ಮಾಡುವಾಗ ಉತ್ಪತ್ತಿಯಾಗುವ ತ್ಯಾಜ್ಯವನ್ನು ರಸ್ತೆ ಬದಿ, ಖಾಲಿ ನಿವೇಶನಗಳು, ಜಲಮೂಲಗಳು ಹಾಗೂ ಕೆರೆಯಂಚುಗಳಲ್ಲಿ ಸುರಿಯಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ.

ದಂಡ ವಿಧಿಸಿದರೂ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಶಿವಳ್ಳಿಯಲ್ಲಿ ಪಾಲಿಕೆಗೆ ಸೇರಿದ 67 ಎಕರೆ ಜಾಗ ಇದೆ. ಅದರಲ್ಲಿ ಐದು ಎಕರೆಯಲ್ಲಿ ಕಟ್ಟಡ ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣವಾಗಲಿದೆ. ಈಗಾಗಲೇ ರಸ್ತೆ, ಶೌಚಾಲಯ, ಶೆಡ್‌ ಸೇರಿದಂತೆ ಮೂಲಸೌಕರ್ಯಗಳು ಸಿದ್ಧಗೊಂಡಿವೆ. ಘಟಕ ನಿರ್ಮಾಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 3.5 ಕೋಟಿ ಅನುದಾನ ಬಿಡುಗಡೆ ಆಗಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ರಾಷ್ಟ್ರೀಯ ಶುದ್ಧ ಗಾಳಿ ಯೋಜನೆಯಡಿ ಸಹ ಘಟಕ ನಿರ್ಮಾಣಕ್ಕೆ ಅನುದಾನ ಸಿಗಲಿದೆ.

ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಪ್ಲ್ಯಾನ್

2016-17ರಲ್ಲಿಯೇ ಕಟ್ಟಡ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಗಾಗಿ ಅದು ಸಾಧ್ಯವಾಗಿರಲಿಲ್ಲ. 2016-17ರ ಯೋಜನೆಯಂತೆ ಪ್ರತಿ ದಿನಕ್ಕೆ 50 ಟನ್‌ ಕಟ್ಟಡ ತ್ಯಾಜ್ಯ ಸಂಸ್ಕರಣೆ ಮಾಡುವ ಸಾಮರ್ಥ್ಯದ ಘಟಕ ನಿರ್ಮಾಣ ಮಾಡುವ ಗುರಿ ಇತ್ತು. ಈಗ ನಗರದ ಬೆಳವಣಿಗೆ ಆಧರಿಸಿ ಮತ್ತು ಮುಂದಿನ 10 ವರ್ಷಗಳಲ್ಲಿ ಆಗಬಹುದಾದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದಿನಕ್ಕೆ 200 ಟನ್‌ ಮತ್ತು ಅದಕ್ಕಿಂತ ಹೆಚ್ಚು ಸಂಸ್ಕರಣೆ ಮಾಡುವ ಘಟಕ ಸ್ಥಾಪಿಸುವ ಯೋಜನೆ ಇದೆ.

ನಗರದಲ್ಲಿ ತ್ಯಾಜ್ಯಗಳ ಜೊತೆಗೆ, ಕಟ್ಟಡದ ತ್ಯಾಜ್ಯವೂ ಹೆಚ್ಚುತ್ತಿರುವುದರಿಂದ ವ್ಯವಸ್ಥಿತ ನಿರ್ವಹಣೆಗೆ ಯೋಜನೆ ರೋಪಿಸಲಾಗಿದೆ. ಈ ತ್ಯಾಜ್ಯಗಳಲ್ಲಿನ 20 ಶೇಕಡ ಮರುಬಳಕೆ ಮಾಡುವಂತೆ ಟೆಂಡರ್​ ಪಡೆದವರಿಗೆ ಆದೇಶ ನೀಡಲಾಗುವುದು ಇದರಿಂದ ಮರುಬಳಕೆ ವಸ್ತುಗಳ ಬಳಕೆಯೂ ಆಗುತ್ತದೆ -ಈರೇಶ ಅಂಚಟಗೇರಿ, ಮೇಯರ್

ಇದನ್ನೂ ಓದಿ : ಅವೈಜ್ಞಾನಿಕ ರಸ್ತೆ ಕಾಮಗಾರಿ ಆರೋಪ: ರಾಮನಗರದಲ್ಲಿ ವಿಶೇಷಚೇತನ ಸಹೋದರರ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.