ಹುಬ್ಬಳ್ಳಿ : ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯ್ ಕುಮಾರ್ ಅಪ್ಪಾಜಿ ಸ್ವಪಕ್ಷದ ವಿರುದ್ಧವೇ ಅಖಾಡಕ್ಕೆ ಇಳಿದಿದ್ದಾರೆ.
ಡಾ.ವಿಜಯ್ಕುಮಾರ್ ಅಪ್ಪಾಜಿ ವಾರ್ಡ್ ನಂಬರ್ 28ರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಸ್ಥಳೀಯರನ್ನು ಕಡೆಗಣಿಸಿ ಇತರರಿಗೆ ಮಣೆ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ಕಮಲ ನಾಯಕರ ಈ ನಿರ್ಧಾರದಿಂದ ಅಸಮಾಧಾನಗೊಂಡಿದ್ದ ವಿಜಯ್ಕುಮಾರ್ ಅಪ್ಪಾಜಿಯವರನ್ನು ಬೆಂಬಲಿಗರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ಕಾಂಗ್ರೆಸ್ನ ಮಾಜಿ ಪಾಲಿಕೆ ಸದಸ್ಯ ಗಣೇಶ ಟಗರಗುಂಟಿ ಹಾಗೂ ಹೇಮಲತಾ ಶಿವಮಠಗೆ ಟಿಕೆಟ್ ಸಿಗದ ಹಿನ್ನೆಲೆ, ಪಕ್ಷೇತರ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.