ಹುಬ್ಬಳ್ಳಿ: ನಗರದ ಅಶೋಕ ಆಸ್ಪತ್ರೆಯ ವೈದ್ಯರೊಬ್ಬರು ಗರ್ಭಕೋಶ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.
ಡಾ.ಶ್ರೀಧರ ದಂಡಪ್ಪನವರ ಎಂಬುವ ಸ್ತ್ರೀ ರೋಗ ತಜ್ಞರು ಸುಮಾರು ಐದು ವರ್ಷಗಳಿಂದ ಹೊಟ್ಟೆನೋವು ಹಾಗೂ ರಕ್ತಸ್ರಾವದಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಯೊಬ್ಬರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.
ಈ ಮೂಲಕ ಗರ್ಭಕೋಶದಿಂದ 25x20 ಸೆಂಟೀ ಮೀಟರ್ ಗಾತ್ರದ ಗಡ್ಡೆಯನ್ನು ಹೊರತೆಗೆಯಲಾಗಿದ್ದು, ಮಹಿಳೆಗೆ ಮರುಜೀವ ನೀಡಿದ್ದಾರೆ. ಇದೊಂದು ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆ ಎಂದು ಪರಿಗಣಿಸಲಾಗಿದ್ದು, ಮಹಿಳೆ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.