ಕುಂದಗೋಳ (ಹುಬ್ಬಳ್ಳಿ): ಸಾಲಬಾಧೆ ತಾಳಲಾರದೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ನಡೆದಿದೆ.
ಬಸಣ್ಣಪ್ಪ ದೂಳ್ಳನವರ (60) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಕೆವಿಜಿ ಬ್ಯಾಂಕ್ನಲ್ಲಿ 1 ಲಕ್ಷ ರೂ. ಹಾಗೂ ಕೈಗಡವಾಗಿ 3 ಲಕ್ಷ ರೂ. ಸಾಲ ಮಾಡಿದ್ದನಂತೆ. ಸರಿಯಾದ ಮಳೆಯಾಗದ ಕಾರಣ ಹತ್ತಿ ಇಳುವರಿ ಕಡಿಮೆಯಾಗಿದೆ. ಇದನ್ನೇ ನಂಬಿಕೊಂಡಿದ್ದ ರೈತ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.