ಹುಬ್ಬಳ್ಳಿ: ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಜೈ ಭೀಮ ಅಖಿಲ ಭಾರತ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅಪಮಾನವಾಗಿದೆ. ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.