ETV Bharat / state

ಕೊರೊನಾ ಸೋಂಕಿತರ ಆತಂಕ ದೂರ ಮಾಡಿದ ಕಿಮ್ಸ್: 13 ಜನರಿಗೆ ಪ್ಲಾಸ್ಮಾ ಥೆರಪಿ ಯಶಸ್ವಿ - hubli kims success in plasma therapy

ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡುವಲ್ಲಿ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆ ಯಶಸ್ವಿಯಾಗಿದೆ. ಕಿಮ್ಸ್​ನಲ್ಲಿ ಪ್ಲಾಸ್ಮಾ ಥೆರಪಿ ಪಡೆದ 13 ರೋಗಿಗಳು ಗುಣಮುಖರಾಗಿದ್ದಾರೆ.

Kims
ಕಿಮ್ಸ್
author img

By

Published : Jul 24, 2020, 3:28 PM IST

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್​) ಕೊರೊನಾ ವಿರುದ್ಧ ಹೋರಾಟ ನಡೆಸಿದೆ. ಹೆಚ್ಚುತ್ತಿರುವ ಸೋಂಕಿನ ಮಧ್ಯದಲ್ಲಿಯೇ ಕಿಮ್ಸ್ ಆಸ್ಪತ್ರೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.

ಕಿಮ್ಸ್ ನೀಡುವ ಪ್ಲಾಸ್ಮಾ ಥೆರಪಿ ಸೋಂಕಿತರ ಆತಂಕವನ್ನು ಒಂದಿಷ್ಟು ಕಡಿಮೆಗೊಳಿಸಿದೆ. ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಕಿಮ್ಸ್, ರಾಜ್ಯದ ಮೊದಲ ಯಶಸ್ವಿ ಪ್ಲಾಸ್ಮಾ ಥೆರಪಿ ಮಾಡಿದ ಕೀರ್ತಿಗೆ ಪಾತ್ರವಾಗಿದೆ.

ಬೆಂಗಳೂರಿನ ಮೆಡಿಕಲ್ ಕಾಲೇಜ್ ಆ್ಯಂಡ್ ರಿಸರ್ಚ್ ಇನ್ಸ್ಟಿಟ್ಯೂಟ್​​ನಲ್ಲಿ ಈ ಹಿಂದೆ 8 ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಲಾಗಿತ್ತು, ಈ ಪೈಕಿ ಐವರು ಮಾತ್ರ ಗುಣಮುಖರಾಗಿದ್ದರು. ಆದರೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದ 13 ಜನರು ಕೂಡ ಗುಣಮುಖರಾಗಿರುವುದು ವಿಶೇಷವಾಗಿದೆ.

ಕರ್ನಾಟಕದ 14 ಮೆಡಿಕಲ್ ಕಾಲೇಜುಗಳು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಮುಂದೆ ಬಂದಿದ್ದವು. ಈ ಮೆಡಿಕಲ್ ಕಾಲೇಜುಗಳ ಪೈಕಿ ಐಎಂಸಿಆರ್ ನಿಂದ ಮೊದಲ ಅನುಮೋದನೆ ಪಡೆದ ಕೀರ್ತಿ ಕಿಮ್ಸ್ ಆಸ್ಪತ್ರೆಗೆ ಸಲ್ಲುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.