ಹುಬ್ಬಳ್ಳಿ: ರಾಜ್ಯ ಸರ್ಕಾರದ ಆದೇಶದ ಪ್ರಕಾರ ಭಾನುವಾರ ಲಾಕ್ಡೌನ್ ಜಾರಿಯಾಗಿದ್ದು, ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಎಲ್ಲ ಘಟಕಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಬಸ್ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.
ನಿತ್ಯವೂ ಬಸ್ಗಳು ಮತ್ತು ಪ್ರಯಾಣಿಕರಿಂದ ತುಂಬಿರುತ್ತಿದ್ದ ಬಸ್ ನಿಲ್ದಾಣಗಳು ಇಂದು ಇಡೀ ದಿನ ಬಸ್ಗಳಿಂದ ಹಾಗೂ ಪ್ರಯಾಣಿಕರಿಂದ ಮುಕ್ತವಾಗಿದ್ದವು. ಈ ಅವಕಾಶವನ್ನು ಬಳಸಿಕೊಂಡು ಕೊರೊನಾ ವೈರಾಣು ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ, ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ, ತಡಸ, ಕಲಘಟಗಿ, ಕುಂದಗೋಳ, ನವಲಗುಂದ ಮತ್ತು ಅಣ್ಣಿಗೇರಿ ಬಸ್ ನಿಲ್ದಾಣಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು.
ನಂತರ ಸೋಡಿಯಂ ಹೈಪೋಕ್ಲೋರೈಟ್ ದ್ರಾವಣ ಸಿಂಪಡಿಸಿ ಸ್ಯಾನಿಟೈಸೇಷನ್ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಿಬ್ಬಂದಿ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರ ಮತ್ತು ಎಲ್ಲ ಬಸ್ ಘಟಕಗಳನ್ನು ಸಹ ಸಂಪೂರ್ಣವಾಗಿ ಸ್ವಚ್ಚಗೊಳಿಸಿ ಸ್ಯಾನಿಟೈಸೇಷನ್ ಮಾಡಲಾಗಿದೆ.