ಹುಬ್ಬಳ್ಳಿ : ರಷ್ಯಾ-ಉಕ್ರೇನ್ ಮಧ್ಯೆ ಯುದ್ಧ ಆರಂಭವಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲ್ಲಿರುವ ಏರ್ಪೋರ್ಟ್ಗಳ ಮೇಲೆ ರಷ್ಯಾ ದಾಳಿ ಮಾಡಿರುವ ಹಿನ್ನೆಲೆ ವಿಮಾನ ಸೇವೆ ಸ್ಥಗಿತಗೊಂಡಿದೆ. ಹಲವಾರು ವಿದೇಶಿ ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದು, ಅವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರವಾಡ ಜಿಲ್ಲೆಯ ಓರ್ವ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಾಳೆ. ಉಕ್ರೇನ್ ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದ್ದು, ಇಲ್ಲಿರುವ ವಿದ್ಯಾರ್ಥಿನಿಯ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಯುವತಿ ಚೈತ್ರಾ MBBS ವ್ಯಾಸಂಗಕ್ಕೆ ಉಕ್ರೇನ್ ದೇಶಕ್ಕೆ ತೆರಳಿದ್ದರು. ಚೈತ್ರಾ MBBS ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದು, ತವರಿಗೆ ಮರಳಲು ಸಿದ್ಧವಾಗಿದ್ದರು. ಆದರೆ ವಿಮಾನ ನಿಲ್ದಾಣದ ಮೇಲೆ ದಾಳಿ ಹಿನ್ನೆಲೆ, ವಿಮಾನ ಹಾರಾಟ ರದ್ದು ಮಾಡಲಾಗಿದೆ.
ಇದನ್ನೂ ಓದಿ : ಉಕ್ರೇನ್ ಏರ್ಪೋರ್ಟ್ನಲ್ಲಿ ಸಿಲುಕಿರುವ ರಾಜ್ಯದ 10 ವಿದ್ಯಾರ್ಥಿಗಳ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ
ಈ ಹಿನ್ನೆಲೆ ಪ್ರಯಾಣ ರದ್ದಾದ ಕಾರಣ ಪ್ರಯಾಣಿಕರನ್ನ ಬಂಕರ್ನಲ್ಲಿ ಉಳಿದುಕೊಳ್ಳಲು ಉಕ್ರೇನ್ ಸರ್ಕಾರ ವ್ಯವಸ್ಥೆ ಮಾಡಿದೆ. ಚೈತ್ರಾ ಕುಟುಂಬದ ಸದಸ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಚೈತ್ರಾ ಅವರ ತಾಯಿ ಖಾಸಗಿ ಶಾಲೆ ನಡೆಸುತ್ತಿದ್ದಾರೆ.