ETV Bharat / state

ಹುಬ್ಬಳ್ಳಿ: ಬೆಳೆ ವಿಮೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

author img

By

Published : Aug 3, 2020, 2:47 PM IST

ರೈತರಿಗೆ ಬೆಳೆ ವಿಮೆ ಹಾಗೂ ಅತಿವೃಷ್ಠಿಯಿಂದ ಮನೆ ಕಳೆದಕೊಂಡ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು..

Hubli: Protests by farmers demanding crop insurance
ಹುಬ್ಬಳ್ಳಿ: ಬೆಳೆ ವಿಮೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಹುಬ್ಬಳ್ಳಿ : ರೈತರಿಗೆ ಬೆಳೆ ವಿಮೆ ಹಾಗೂ ಅತಿವೃಷ್ಠಿಯಿಂದ ಮನೆ ಕಳೆದಕೊಂಡ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಲಾಯಿತು.

ಬೆಳೆ ವಿಮೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಇದೇ ವೇಳೆ ಮಾತನಾಡಿದ ರೈತ ಮುಖಂಡ ಸಿದ್ದಣ್ಣ ತೇಜಿ, ಕಳೆದ ವರ್ಷ ಅತಿವೃಷ್ಠಿಯಿಂದ ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದವು. ಇದೇ ಸಂದರ್ಭದಲ್ಲಿ ವಿಮಾ ಕಂಪನಿಗಳು ರೈತರಿಂದ ವಿಮೆ ಕಟ್ಟಿಸಿಕೊಂಡಿದ್ದವು. ಆದರೆ, ಸರ್ಕಾರ ಹಾಗೂ ವಿಮಾ ಕಂಪನಿಗಳು ರೈತರಿಗೆ ಬೆಳೆ ವಿಮೆ ನೀಡದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಅಷ್ಟೇ ಅಲ್ಲ, ರಾಜ್ಯ ಸರ್ಕಾರ ಅತಿವೃಷ್ಠಿಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆ ತರಲು ವಿಫಲವಾಗಿದೆ ಎಂದು ದೂರಿದರು.

ಕೂಡಲೆ ರಾಜ್ಯ ಸರ್ಕಾರ ರೈತರಿಗೆ ಬೆಳೆ ವಿಮೆ ನೀಡಬೇಕು. ಜೊತೆಗೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುಬೇಕು ಎಂದು ಆಗ್ರಹಿಸಿ ಪ್ರತಿಭಟನಾ ನಿರತರು ತಹಶೀಲ್ದಾರ್‌ರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.