ಹುಬ್ಬಳ್ಳಿ: ಇತ್ತೀಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 104 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಆರು ಜನ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ಮೂವರು ಅಪ್ರಾಪ್ತರಿದ್ದಾರೆ. ಬಂಧಿತ ಗಲಭೆಕೋರರ ಹಿನ್ನೆಲೆ ಕೆದಕಲು ವಿಶೇಷ ಪೊಲೀಸ್ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಬಂಧಿತರಲ್ಲಿ ರೌಡಿಶೀಟರ್ಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡದ ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ಗಳ ಮಾಹಿತಿ ಪಡೆಯಲಾಗುತ್ತಿದೆ. ಇಲ್ಲಿಯವರೆಗೂ ಬಂಧಿತರಾದವರಲ್ಲಿ ಬೈಕ್ ಕಳ್ಳತನ, ಮೊಬೈಲ್ ಕಳ್ಳತನ, ಮನೆಗಳ್ಳತನ.. ಹೀಗೆ ಅನೇಕ ಪ್ರಕರಣಗಳಲ್ಲಿ ಭಾಗಿಯಾದವರೇ ಸೇರಿದ್ದಾರೆ. ಪೊಲೀಸರು ಆರೋಪಿಗಳನ್ನು ಕರೆತರುತ್ತಿದ್ದಂತೆಯೇ ಅವರ ಕುಟುಂಬಸ್ಥರು ಠಾಣೆಯೆದುರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಪ್ರಕರಣದಲ್ಲಿ ವಿಡಿಯೋ, ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ : ಸಿಎಂ ಬೊಮ್ಮಾಯಿ