ETV Bharat / state

ಪಾಕ್ ಪರ ಘೋಷಣೆ ಕೇಸ್‌ನಲ್ಲಿ ಕರ್ತವ್ಯ ಲೋಪ‌: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್​​ಪೆಕ್ಟರ್ ಸಸ್ಪೆಂಡ್ - Hubli inspector suspend news

ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ್‌ ಇನ್ಸ್​​ಪೆಕ್ಟರ್ ಅಮಾನತುಗೊಂಡಿದ್ದಾರೆ.

Inspector
Inspector
author img

By

Published : Jun 12, 2020, 10:12 AM IST

ಹುಬ್ಬಳ್ಳಿ: ನಗರದ ಕೆ.ಎಲ್.ಇಂಜಿನಿಯರಿಂಗ್ ‌ಕಾಲೇಜಿನಲ್ಲಿ‌ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಇನ್ಸ್​​ಪೆಕ್ಟರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್​​ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಸಸ್ಪೆಂಡ್ ಮಾಡಿದ್ದಾರೆ.

ಅಮಾನತು ಶಿಕ್ಷೆ ಏಕೆ?: 90 ದಿನಗಳೊಳಗೆ ಪ್ರಕರಣದ ಜಾರ್ಜ್‌ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ 2 ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಹೀಗಾಗಿ ಪ್ರಕರಣದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರ‌‌ ನಿರ್ಲಕ್ಷ್ಯ ಕಂಡು ಬಂದಿತ್ತು. ಆದ್ದರಿಂದ ಕರ್ತವ್ಯ ಲೋಪ‌, ನಿರ್ಲಕ್ಷ್ಯತನದ ಗಂಭೀರ ಸ್ವರೂಪದ ಆರೋಪದಡಿ ಪೊಲೀಸ್‌ ಅಧಿಕಾರಿ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.