ಹುಬ್ಬಳ್ಳಿ: ಬೆಳಗಾವಿಯ ಪೀರನವಾಡಿಯಲ್ಲಿ ನಾಡಪ್ರೇಮಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಸಂಗ್ರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪೀರನವಾಡಿ ಗ್ರಾಮದಲ್ಲಿ ನಾಡಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ತೆರವುಗೊಳಿಸಿರುವುದು ಸ್ವಾತಂತ್ರ್ಯ ಹೋರಾಟಗಾರನಿಗೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬೆಳಗಾವಿ ಜಿಲ್ಲಾಧಿಕಾರಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಹಿಂದೆ ಇದ್ದ ಸ್ಥಳದಲ್ಲೇ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.