ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ಆರೋಪಿಗಳಿಗೆ ಬೇಲಾ ಅಥವಾ ಜೈಲಾ? ಎಂಬುದು ಇಂದು ನಿರ್ಧಾರವಾಗಲಿದೆ.
ನಗರದ ಕೆಎಲ್ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿ ಸದ್ಯ ಹಿಂಡಲಗ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡಿಸಲು ಆರೋಪಿಗಳ ಪರ ವಕೀಲರು ಪ್ರಯತ್ನ ನಡೆಸಿದ್ದಾರೆ.
ಹುಬ್ಬಳ್ಳಿಯ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಾಲ್ಕು ದಿನಗಳ ಹಿಂದೆ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಸರ್ಕಾರಿ ವಕೀಲರು ಮತ್ತು ಆರೋಪಿಗಳ ಪರ ವಕೀಲರ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಜಾಮೀನು ಕುರಿತ ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದಾರೆ.
ಹೀಗಾಗಿ ಆರೋಪಿಗಳಿಗೆ ಜಾಮೀನು ಸಿಗುತ್ತಾ ಅಥವಾ ರದ್ದಾಗುತ್ತಾ ಎಂಬುದು ಇಂದು ಗೊತ್ತಾಗಲಿದೆ.