ಹುಬ್ಬಳ್ಳಿ: ಶ್ರೀಮಂತರ ಮನೆಗಳಲ್ಲಿ ಮನೆಗೆಲಸ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಖತರ್ನಾಕ್ ಮಹಿಳೆಯನ್ನು ಉಪನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಗಾಯತ್ರಿ ಸಂದೀಪ ಗಾಯಕವಾಡ (28) ಬಂಧಿತ ಮಹಿಳೆ. ಆರೋಪಿಯಿಂದ 11 ಲಕ್ಷಕ್ಕೂ ಅಧಿಕ ಮೌಲ್ಯದ ಸುಮಾರು 250 ಗ್ರಾಂ ಚಿನ್ನಾಭರಣ, ಒಂದು ಮೊಬೈಲ್ ಫೋನ್ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚಿಗೆ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣದ ಬಳಿ ಆರೋಪಿ ಮಹಿಳೆ ಮೊಬೈಲ್ ಫೋನ್ ಕಳ್ಳತನ ಮಾಡಿದ್ದಳು. ಕೃತ್ಯಕ್ಕೆ ಸಂಬಂಧಿಸಿದಂತೆ ಈಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಭಯಾನಕ ಸತ್ಯ ಬಯಲಿಗೆ ಬಂದಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಓದಿ: ಬೆಂಗಳೂರು: ಫುಡ್ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ..ಇಬ್ಬರ ಸಾವು, ಮೂವರ ವಿರುದ್ಧ ಪ್ರಕರಣ ದಾಖಲು