ETV Bharat / state

ಗೌರಿ - ಗಣೇಶ ಹಬ್ಬಕ್ಕೆ ವಾಯವ್ಯ ಸಾರಿಗೆ ಬಂಪರ್​ ಗಿಫ್ಟ್​: 100 ಹೆಚ್ಚುವರಿ ಬಸ್ ವ್ಯವಸ್ಥೆ

ಗೌರಿ ಗಣೇಶ ಹಬ್ಬದ ಅವಧಿಯಲ್ಲಿ ಜಿಲ್ಲೆಯೊಳಗೆ ಹಾಗೂ ಮುಂಬೈ, ಪುಣೆ, ಗೋವಾ, ಬೆಂಗಳೂರು ಮತ್ತಿತರ ಸ್ಥಳಗಳಿಂದ ನಗರಕ್ಕೆ ಮತ್ತು ಜಿಲ್ಲೆಯ ವಿವಿಧ ಸ್ಥಳಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ನಿತ್ಯದ ಬಸ್​ಗಳೊಂದಿಗೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 100 ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

hubli
ಗೌರಿ-ಗಣೇಶ ಹಬ್ಬಕ್ಕೆ ವಾಯುವ್ಯ ಸಾರಿಗೆ ಬಂಪರ್​ ಗಿಫ್ಟ್​
author img

By

Published : Sep 8, 2021, 9:20 AM IST

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬದ ನಿಮಿತ್ತ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ 100 ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

100 ಹೆಚ್ಚುವರಿ ಬಸ್​ಗಳ ವ್ಯವಸ್ಥೆ

ಹುಬ್ಬಳ್ಳಿ ವಿಭಾಗದಲ್ಲಿ ನಿತ್ಯ 365 ರಿಂದ 375 ಬಸ್​ಗಳು ಸಂಚರಿಸುತ್ತಿವೆ. ಗೌರಿ ಗಣೇಶ ಹಬ್ಬದ ಅವಧಿಯಲ್ಲಿ ಜಿಲ್ಲೆಯೊಳಗೆ ಹಾಗೂ ಮುಂಬೈ, ಪುಣೆ, ಗೋವಾ, ಬೆಂಗಳೂರು ಮತ್ತಿತರ ಸ್ಥಳಗಳಿಂದ ನಗರಕ್ಕೆ ಮತ್ತು ಜಿಲ್ಲೆಯ ವಿವಿಧ ಸ್ಥಳಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ನಿತ್ಯದ ಬಸ್​ಗಳೊಂದಿಗೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 100 ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ವೋಲ್ವೊ, ಸ್ಲೀಪರ್, ರಾಜಹಂಸ, ವೇಗದೂತ ಸೇರಿದಂತೆ ಎಲ್ಲ ಬಗೆಯ ಬಸ್​ಗಳನ್ನು ರಸ್ತೆಗಿಳಿಸಲು ನಿರ್ಧರಿಸಲಾಗಿದೆ.

ಹಬ್ಬಕ್ಕಾಗಿ ಜಿಲ್ಲೆಗೆ ಬರುವವರ ಅನುಕೂಲಕ್ಕಾಗಿ ಬೆಂಗಳೂರು, ಮುಂಬೈ, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹಾಗೂ ನೆರೆಯ ಜಿಲ್ಲೆಗಳಿಂದ ಹುಬ್ಬಳ್ಳಿಗೆ ಸೆ.8 ರಂದು ಬುಧವಾರ 20 ಹಾಗೂ 9ರಂದು ಗುರುವಾರ 30 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ, ಹಬ್ಬ ಮುಗಿಸಿ ಹಿಂದಿರುಗಲು ಹುಬ್ಬಳ್ಳಿಯಿಂದ ಸೆ.12 ಹಾಗೂ 13ರಂದು 20 ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಮುಂಗಡ ಬುಕ್ಕಿಂಗ್​​ಗೆ ಅವಕಾಶ

ಈ ವಿಶೇಷ ಬಸ್​ಗಳು ಹುಬ್ಬಳ್ಳಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ. ವಿಶೇಷ ಬಸ್ ಗಳಿಗೆ www.ksrtc.in ವೆಬ್ ಸೈಟ್​ನಲ್ಲಿ ಆನ್​ಲೈನ್ ಮೂಲಕ ಅಥವಾ ಬಸ್ ನಿಲ್ದಾಣದಲ್ಲಿನ ಕೌಂಟರ್​ನಲ್ಲಿ ಹಾಗೂ ಫ್ರಾಂಚೈಸಿ ಕೇಂದ್ರಗಳಲ್ಲಿ ಮುಂಗಡ ಬುಕ್ಕಿಂಗ್​​​​ಗೆ ಅವಕಾಶ ಕಲ್ಪಿಸಲಾಗಿದೆ.

ವಿಶೇಷ ರಿಯಾಯಿತಿಯೂ ಘೋಷಣೆ

ನಾಲ್ಕು ಅಥವಾ ಹೆಚ್ಚಿನ ಆಸನಗಳನ್ನು ಒಂದೇ ಟಿಕೆಟ್​ನಲ್ಲಿ ಕಾಯ್ದಿರಿಸಿದರೆ ಮೂಲ ಪ್ರಯಾಣ ದರದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣಕ್ಕೆ ಒಮ್ಮೆಗೇ ಮುಂಗಡ ಬುಕ್ಕಿಂಗ್ ಮಾಡಿದರೆ ಬರುವಾಗಿನ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.