ಹುಬ್ಬಳ್ಳಿ: ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿ ಮಾಡಿರುವುದರಿಂದ ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಸಂಕಷ್ಟ ಅನುಭವಿಸುವಂತಾಗಿದೆ.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮೊದಲೇ ನಷ್ಟದ ಸುಳಿಯಲ್ಲಿ ಸಿಲುಕಿದೆ. ಸಾರ್ವಜನಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುವ ಈ ಇಲಾಖೆ ಲಾಕ್ಡೌನ್ ಸಂದರ್ಭದಲ್ಲಿ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಅನ್ಲಾಕ್ ಬಳಿಕ ಚೇತರಿಸಿಕೊಳ್ಳುವ ನಿರೀಕ್ಷೆ ಇಟ್ಟುಕೊಂಡಿದ್ದ ಸಂಸ್ಥೆಗೆ ನೈಟ್ ಕರ್ಫ್ಯೂ ನಿರ್ಧಾರ ಮುಳುವಾಗಿದೆ.
ಈಗಾಗಲೇ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಾತ್ರಿ ಸಮಯದಲ್ಲಿ ಪ್ರಯಾಣಿಕರು ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಆರ್ಥಿಕ ವ್ಯವಸ್ಥೆಗೆ ಭಾರಿ ಪೆಟ್ಟುಬಿದ್ದಿದೆ ಎಂದು ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ಡಿಸಿ ರಾಮನಗೌಡರ ತಿಳಿಸಿದ್ದಾರೆ.