ಹುಬ್ಬಳ್ಳಿ : ಮಗುವಿಗೆ ಹಾಲುಣಿಸುತ್ತಿರುವಾಗ ಪಾಪಿ ಪತಿಯೋರ್ವ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿದ ಘಟನೆ ಗಂಗಾಧರ್ ನಗರದಲ್ಲಿ ನಡೆದಿದೆ.
ಪತಿ ಸುನಿಲ್ ತನ್ನ ಪತ್ನಿಯ ಎದೆ ಭಾಗಕ್ಕೆ ಬ್ಲೇಡ್ನಿಂದ ಹಲ್ಲೆ ಮಾಡಿದ್ದಾನೆ. ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಆದರೆ, ಇಂದು ಬೆಳಗ್ಗೆ ಪತಿ-ಪತ್ನಿಯ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಮಗುವಿಗೆ ಹಾಲುಣಿಸುತ್ತಿದ್ದ ಪತ್ನಿಯ ಎದೆ ಭಾಗಕ್ಕೆ ಪತಿ ಬ್ಲೇಡ್ನಿಂದ ಹಲ್ಲೆ ಮಾಡಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಕಿಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗುವಿಗೆ ಬ್ಲೇಡ್ ತಾಗಿಲ್ಲ. ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.