ಧಾರವಾಡ : ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿವೋರ್ವ ತನ್ನ ಪತ್ನಿಯ ಮೂಗು ಕಚ್ಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಉಮೇಶ್ ಎಂಬಾತ ತನ್ನ ಹೆಂಡತಿ ಗೀತಾ ಮೇಲೆ ಹಲ್ಲೆ ಮಾಡಿದ್ದಾನೆ. ದಂಪತಿ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು. ಹಾಗಾಗಿ, ಗೀತಾ ತವರು ಮನೆ ಸೇರಿದ್ದಳು. ಅಲ್ಲಿಗೆ ಹೋದ ಉಮೇಶ್, ಕುಡಿದ ಮತ್ತಿನಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡಿ ಆಕೆಯ ಮೂಗನ್ನು ಕಚ್ಚಿದ್ದಾನೆ.
ಓದಿ : ವೀಕೆಂಡ್ ಮೋಜು-ಮಸ್ತಿ.. ಕುಡಿದು ಕಾರು ಚಲಾಯಿಸಿ ಕಂಬಕ್ಕೆ ಡಿಕ್ಕಿ ಹೊಡೆದ!
ಹೆಂಡತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ, ತನ್ನ ಅತ್ತೆಯ ಕತ್ತು ಹಿಸುಕಿ ಆಕೆಯ ಮೇಲೂ ಹಲ್ಲೆ ಮಾಡಿ ಉಮೇಶ್ ಪರಾರಿಯಾಗಿದ್ದಾನೆ. ಸದ್ಯ, ಹಲ್ಲೆಗೊಳಗಾದ ಗೀತಾ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.