ಹುಬ್ಬಳ್ಳಿ: ಇಂದು ಸಂಜೆಯೊಳಗೆ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗುತ್ತೆ. ನಾನು ಕೂಡಾ ಪ್ರಬಲ ಆಕಾಂಕ್ಷಿ. ನಮ್ಮಲ್ಲಿ ಇಬ್ಬರು ಟಿಕೆಟ್ ಕೇಳುತ್ತಿದ್ದೇವೆ. ಚುನಾವಣೆಯನ್ನ ನಾನು ಒಬ್ಬನೇ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಒಬ್ಬನಿಂದ ಚುನಾವಣೆ ಮಾಡಲು ಸಾಧ್ಯವಿಲ್ಲ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸನ್ನಿವೇಶ ಉದ್ಭವ ಆಗುವುದಿಲ್ಲ. ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತೆ. ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಮ್ಮ ಪಕ್ಷದ ಮುಖಂಡರು ನನಗೆ ಟಿಕೆಟ್ ನಿಡುತ್ತಾರೆ ಎಂಬ ವಿಶ್ವಾಸವಿದೆ. ನನಗೆ ಟಿಕೆಟ್ ಫೈನಲ್ ಆಗುತ್ತೆ ಎಂಬ ನಂಬಿಕೆ ನನಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.