ETV Bharat / state

ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ - ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ ನಗರ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಿಎಂ ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jun 13, 2023, 12:38 PM IST

Updated : Jun 13, 2023, 12:47 PM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯಲ್ಲ ಆ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ನಾನು ಅದನ್ನು ಬಯಸೋಕು ಹೋಗುತ್ತಿಲ್ಲ. ವಿಪಕ್ಷ ಸ್ಥಾನ ಆಯ್ಕೆ ವಿಳಂಬವಾಗುತ್ತಿಲ್ಲ, ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ತಮ್ಮ‌ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರತಿ ಬಾರಿ ನಡೆಯೋ ಸಂಪ್ರದಾಯ ಇದಾಗಿದೆ. ಸೋಲಿನ ಬಗ್ಗೆ ರಾಷ್ಟ್ರೀಯ ನಾಯಕರು ಬೇಸರ ಮಾಡಿಕೊಳ್ಳುವ ಪ್ರಶ್ನೆಯಿಲ್ಲ. ಜನರು ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ನಾನೇ ಸೋಲಿನ ನೈತಿಕ ಹೊಣೆ ಹೊತ್ತಿದ್ದೇನೆ. ಎಲ್ಲರ ಸೋಲಿಗೆ ನಾನೇ ಹೊಣೆ ಅಂದ ಮೇಲೆ ಅವರ ಆರೋಪದ ಬಗ್ಗೆ ಉತ್ತರಿಸುವ ಪ್ರಶ್ನೆಯಿಲ್ಲ ಎಂದರು.

ಲೋಕಸಭೆಯಲ್ಲಿ ಜೆಡಿಎಸ್​ ಜೊತೆ ಹೊಂದಾಣಿಕೆ ಕುರಿತು ಚರ್ಚೆಗಳು ನಡೆದಿಲ್ಲ ಎಂದ ಬೊಮ್ಮಾಯಿ ಅವರು, ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್​ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಅಂತ ಅವರೆ ಹೇಳಿಕೊಂಡಿದ್ದಾರೆ. ಹಾಗಿದ್ದಾಗ ಮತ್ತೆ ಬಿಜೆಪಿಗೆ ಬರೋ ಪ್ರಶ್ನೆ ಬರಲ್ಲ ಎಂದರು.

ಪ್ರಹ್ಲಾದ್ ಜೋಶಿಗೆ ಟಿಕೆಟ್​ ಕೊಡಬಾರದೆಂಬ ಅಭಿಯಾನ ಕುರಿತು ಮಾತನಾಡಿದ ಬೊಮ್ಮಾಯಿ, ಪ್ರತಿಬಾರಿ ಚುನಾವಣಾ ಪೂರ್ವದಲ್ಲಿ ಇಂತಹ ಅಭಿಯಾನಗಳು ನಡೆಯುತ್ತವೆ. ಅದಕ್ಕೆ ಮಹತ್ವ ಕೊಡೋ ಅಗತ್ಯವಿಲ್ಲ. ಪರಿಷತ್ ಚುನಾವಣೆಯ ಮೂರೂ ಸ್ಥಾನಕ್ಕೆ ನಾವು ಸ್ಪರ್ಧಿಸುತ್ತೇವೆ. ನಮ್ಮಲ್ಲಿಂದ ಪ್ರತಿಪಕ್ಷವಾಗಿ ಸ್ಪರ್ಧೆ ಖಚಿತ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳ ಹೆಸರಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಳೋದು ನಡೀತಿದೆ. ಗ್ಯಾರಂಟಿಗಳ ಬಗ್ಗೆ ನಾವು ಕಾದು ನೋಡ್ತೇವೆ. ಫ್ರೀ ಬಸ್ ಮೂಲಕ ಆರಂಭದ ಶೂರತ್ವ ತೋರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಸರಿಪಡಿಸಬೇಕು. ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನೋ ಕಾರಣಕ್ಕೆ ಬಸ್​ಗಳು ತುಂಬಿ ತುಳುಕುತ್ತಿವೆ. ಈ ನಿಟ್ಟಿನಲ್ಲಿ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.

ಜೊತೆಗೆ ಸಿಎಂ ಸಿದ್ದರಾಮಯ್ಯನವರು ಹಣಕಾಸಿನ‌ ನಿರ್ವಹಣೆಯಲ್ಲಿ ಯಾವ ರೀತಿ ಮುಂದುವರೆಯುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದೆ. ಉಚಿತ ಗ್ಯಾರಂಟಿಗಳಿಗೆ ಯಾವ ರೀತಿ ಹಣ ಹೊಂದಿಸುತ್ತಾರೆ ಅನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಇದನ್ನು ತಿಳಿದುಕೊಳ್ಳುವುದು ಎಲ್ಲರ ಹಕ್ಕು. ಆದರೆ ಯಾರಾದರು ಈ ಬಗ್ಗೆ ಕೇಳಿದರೆ ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ರೀತಿಯ ಧೋರಣೆ ಸರಿಯಲ್ಲ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು.

ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲಾಗುತ್ತಿದೆ. ನಾವು ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಒಮ್ಮೆಗೆ ವಿದ್ಯುತ್ ದರ ಏರಿಸುವುದರಿಂದ ಜನ ಶಾಕ್​ನಲ್ಲಿದ್ದಾರೆ. ಜೊತೆಗೆ 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಸ್ಪಷ್ಟತೆಯಿಲ್ಲ. ಎಲ್ಲ ಹೆಸ್ಕಾಂಗಳು ಸಾಲದಲ್ಲಿ ಮುಳುಗಿವೆ. ಪ್ರಸ್ತುತ ಸರ್ಕಾರ ಗ್ಯಾರಂಟಿ ಕೊಡುವುದರಲ್ಲಿಯೇ ಸಮಯ ಕಳೆಯಬಾರದು.‌ ಸಂಸ್ಥೆಗಳನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಸರ್ಕಾರ ಸಬ್ಸಿಡಿ ಕೊಡುವಾಗ ಮುಂಚಿತವಾಗಿಯೇ ಹಣ ಕೊಡಬೇಕು. ಹೀಗಾದರೇ ಮಾತ್ರ ಸಂಸ್ಥೆಗಳು ಉಳಿಯುತ್ತವೆ ಎಂದರು.

ಮುಂದುವರೆದು, ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್​ನ ತಡವಾಗಿರುವುದರಿಂದ, ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಅಂತಾ ಶಬ್ದ ಬಳಸಲ್ಲ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಪ್ಲಾನ್ ಮಾಡಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮುಖ್ಯಮಂತ್ರಿಗಳು, ಸ್ಥಳೀಯ ಜನಪ್ರತಿನಿಧಿಗಳು ಆ ಟಾಸ್ಕ್ ಫೋರ್ಸ್​ನಲ್ಲಿರಬೇಕು, ಅವರಿಂದ ಸಹಕಾರ ಪಡೆಯಬೇಕು ಹೇಳಿ ಕಾಂಗ್ರೆಸ್​ ಸರ್ಕಾರಕ್ಕೆ ತಮ್ಮ ಸಲಹೆಗಳನ್ನು​​ ಕೊಟ್ಟರು.

ಈ ಕೂಡಲೇ ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್‌ಡಿ‌ಆರ್‌ಎಫ್ ತಂಡಗಳನ್ನು ಚುರುಕುಗೊಳಸಬೇಕು. ಸ್ಥಳೀಯ ಮಟ್ಟದಲ್ಲಿ ಬಿಗಿ ಮಾಡಬೇಕು ಎಂಬ ಒತ್ತಾಯವನ್ನು ಸಹ ಬೊಮ್ಮಾಯಿ ಮಾಡಿದರು.

ಇದನ್ನೂ ಓದಿ: ಹುಬ್ಬಳ್ಳಿ: ಮಹಿಳೆಯರಿಗೆ ಉಚಿತ ಬಸ್ ಪಾಸ್ ಖಂಡಿಸಿ ಆಟೋ ಚಾಲಕರಿಂದ ಪ್ರತಿಭಟನೆ

Last Updated : Jun 13, 2023, 12:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.