ETV Bharat / state

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಭೇಟಿಯಾದ ಡಿ.ಕೆ.ಶಿವಕುಮಾರ್: ಹೇಳಿದ್ದೇನು? - ಜಿಪಂ ಚುನಾವಣೆ

ಶೆಟ್ಟರ್ ಜೊತೆ ನಾವು ಇರುತ್ತೇವೆ. ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇಲೆ ಕೆಲ ಸಂದೇಶ ಹೇಳಬೇಕಿತ್ತು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Former CM Jagadish Shettar, DCM DK Shivakumar
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಡಿಸಿಎಂ ಡಿ ಕೆ ಶಿವಕುಮಾರ್
author img

By

Published : May 31, 2023, 1:08 PM IST

ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳ ಬಗ್ಗೆ ಚರ್ಚೆ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಅನ್ನೋ ಬಗ್ಗೆ ಏನೂ ಚರ್ಚೆ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ತಯಾರಿ ಕುರಿತಂತೆ ಕಾಂಗ್ರೆಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇವೆ. ಅವರೂ ಸಹ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ಧಾರೆ. ಈ ನಿಟ್ಟಿನಲ್ಲಿ ಪಕ್ಷ ನನ್ನ ಜತೆಗೆ ಇದೆ. ಭರವಸೆಯನ್ನೂ ಸಹ ನೀಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿ.ಪಂ ತಾ.ಪಂ ಚುನಾವಣೆ ತಯಾರಿ ಚರ್ಚೆ: ತಾಲೂಕು ಹಾಗೂ ಜಿ.ಪಂ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಿದ್ದು, ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ. ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಸೌಹಾರ್ದತೆಯಿಂದ ಮಾತುಕತೆ ಮಾಡಿದ್ದೇವೆ ಎಂದು ತಿಳಿಸಿದರು.

ಶೆಟ್ಟರ್ ಆಗಮನದಿಂದ ಬದಲಾವಣೆ- ಡಿಕೆಶಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರೂ ವರವನ್ನು ಕೊಡುವುದಿಲ್ಲ ಶಾಪವನ್ನೂ ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ ಮಿತ್ರರು ಸಮಾಜಕ್ಕೆ ಸತ್ಯ ಸಂಗತಿ ತಿಳಿಸಿದ್ದೀರಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್, ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇನೆ. ಬಿ ಫಾರಂ ಕೊಟ್ಟ ಮೇಲೆ ಜಗದೀಶ್ ಶೆಟ್ಟರ್ ಜೊತೆ ಮಾತಾಡಿರಲಿಲ್ಲ. ನಾನು ಪ್ರಚಾರದಲ್ಲಿ ಬ್ಯುಸಿ ಆಗಿದ್ದೆ. ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಶಕ್ತಿ ಬಂದಿದೆ ಎಂದು ಹೇಳಿದರು.

ಸೋಲು ಗೆಲುವು ಚುನಾವಣೆಯಲ್ಲಿ ಸಾಮಾನ್ಯ. ಶೆಟ್ಟರ್, ಸವದಿ ಹಾಗೂ ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಮಾರ್ಗದರ್ಶನ ಕೊಟ್ಟಿದ್ದಾರೆ‌. ಅವರಿಂದ ಬದಲಾಗಣೆ ಆಯ್ತು ಎಂದು ಹೇಳಿದರು. ಶೆಟ್ಟರ್‌ಗೆ ಸ್ಥಾನಮಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ. ಪಕ್ಷ ಅವರ ಜೊತೆ ಇದೆ. ನಾವೇನೂ ಗೌಪ್ಯವಾಗಿ ಇಡುವುದಿಲ್ಲ, ಎಲ್ಲವನ್ನೂ ನಿಮಗೆ ಹೇಳುತ್ತೇವೆ ಎಂದರು.

ಇದನ್ನೂಓದಿ: ಕಾಂಗ್ರೆಸ್​ಗೆ ಶಕ್ತಿ ತುಂಬಿದ ಶೆಟ್ಟರ್ ಸವದಿಯವರನ್ನು ಕೈ ಬಿಡುವುದಿಲ್ಲ: ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.