ETV Bharat / state

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ: ಮುರುಗೇಶ್ ನಿರಾಣಿ - ಬಿ ವೈ ವಿಜಯೇಂದ್ರ

ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

i-welcome-vijayendra-as-bjp-state-president-says-former-minister-murugesh-nirani
ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದನ್ನು ಸ್ವಾಗತಿಸುತ್ತೇನೆ : ಮುರುಗೇಶ್ ನಿರಾಣಿ
author img

By ETV Bharat Karnataka Team

Published : Nov 13, 2023, 1:00 PM IST

Updated : Nov 13, 2023, 1:27 PM IST

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ: ಮುರುಗೇಶ್ ನಿರಾಣಿ

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ. ಈ ಮೂಲಕ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿ ಮಾಡುತ್ತೇವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ಅಳೆದು ತೂಗಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ಇವತ್ತಿನ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ಮಾಡಲು ಅವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಈ ದಿಸೆಯಲ್ಲಿ ನಾವು ಕೂಡ ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಕಾಂಕ್ಷಿ ಎಂಬ ಪತ್ರಕರ್ತರ ಪ್ರಶ್ನೆಗೆ, ನಾನು ಬಾಗಲಕೋಟೆ ಜಿಲ್ಲೆಯ ಲೋಕಸಭೆ ಕ್ಷೇತ್ರದ ಆಕಾಂಕ್ಷಿ ಅಲ್ಲ. ಹೆಚ್ಚಾಗಿ ನಾನು ರಾಜ್ಯದ ರಾಜಕಾರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವುದಕ್ಕೆ ಅಸಮಾಧಾನ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಬೃಹತ್ ಪಕ್ಷ, ಸ್ವಾಭಾವಿಕವಾಗಿ ಅಸಮಾಧಾನ ವ್ಯಕ್ತವಾಗುತ್ತದೆ. ಈ ದಿಸೆಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಅಸಮಾಧಾನಗೊಂಡವನ್ನು ಕರೆಸಿ ಮಾತನಾಡಿ ಅಸಮಾಧಾನ ಹೊಗಲಾಡಿಸುತ್ತಾರೆ. ಇದರ ಜೊತೆಗೆ ಯಾವುದೇ ಹಿರಿಯರನ್ನು ಕಡೆಗಣಿಸುವ ಪ್ರಶ್ನೆ ಪಕ್ಷದಲ್ಲಿಲ್ಲ ಎಂದರು. ಸಿಟಿ ರವಿ ಅಸಮಾಧಾನ ಕುರಿತು ಮಾತನಾಡಿ, ಅವರು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದರು. ಸಹಜವಾಗಿ ಅವರು ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅವರೇ ಪ್ರಮುಖ ಸ್ಥಾನದಲ್ಲಿ ನಿಂತು ಪಕ್ಷ ಸಂಘಟನೆ ಮಾಡಲಿದ್ದಾರೆ ಎಂದರು.

ಸಿದ್ದರಾಮಯ್ಯ ಬಿಟ್ಟಿ ಭಾಗ್ಯ ಕೊಟ್ಟು ಅಧಿಕಾರ ಪಡೆದಿದ್ದಾರೆ. ಆದರೆ ನಾವು ಉತ್ತಮ ಆಡಳಿತ ಇಟ್ಟುಕೊಂಡು ಆಡಳಿತ ನಡೆಸುತ್ತೇವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರ ನಾಲ್ಕು ವ್ಯಕ್ತಿಗಳ ಅಲೈಯನ್ಸ್ ಪಕ್ಷವಾಗಿದೆ. ಇದರ ಮುಂದಾಳತ್ವ ಸಿದ್ದರಾಮಯ್ಯ ವಹಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದೀಗ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ಬಂದ್ ಮಾಡಿದ್ದಾರೆ. ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮುರುಗೇಶ ನಿರಾಣಿ ಕಿಡಿಕಾರಿದರು.

ಇದನ್ನೂ ಓದಿ :ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತದಿಂದ ಗೆಲ್ಲುವುದು ಖಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ

Last Updated : Nov 13, 2023, 1:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.