ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿಯಲ್ಲಿ ಉಪ ಚುನಾವಣೆ ಗೆದ್ದರೆ ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 25 ಸಾವಿರ ಅಂತರದಿಂದ ಎಸ್ ಐ ಚಿಕ್ಕನಗೌಡ್ರು ಗೆಲ್ತಾರೆ. ಸುಲಭವಾಗಿ ಹೆಚ್ಚಿನ ಅಂತರದಿಂದ ಗೆಲ್ತಾರೆ ಎನ್ನುವ ವಿಶ್ವಾಸ ಇದೆ. ಇಂದು ಕುಂದಗೋಳ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿ ಚಿಂಚೋಳಿ ಕ್ಷೇತ್ರಕ್ಕೆ ಹೋಗಿ 16-17 ರಂದು ಮತ್ತೆ ಬರುತ್ತೇನೆ ಎಂದರು.
ಇನ್ನು, ಡಿ ಕೆ ಶಿವಕುಮಾರ್ ಅವರು ಎಷ್ಟೇ ಆಮಿಷವೊಡ್ಡಿದ್ರು ನಮ್ಮ ಪಕ್ಷದವರು ಯಾರು ಕೂಡ ಕಾಂಗ್ರೆಸ್ಗೆ ಹೋಗಲ್ಲ. ಕುಂದಗೋಳ ಹಾಗೂ ಚಿಂಚೋಳಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಶ್ನೆಯೇ ಇಲ್ಲ. ಅವರೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಅವರು ಹೊಡೆದಾಡಿಕೊಂಡರೆ ಅದಕ್ಕೆ ನಾವು ಹೊಣೆನಾ ಎಂದು ಬಿಎಸ್ವೈ ಪ್ರಶ್ನಿಸಿದರು.