ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯನ್ನು ವ್ಯಂಗ್ಯ ಮಾಡಿ ಬ್ಯಾನರ್ ಹಾಕಿದ ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಂಡಿಸಿದೆ.
![If we speaks about mistakes of government they put case on us : KPCC Tweet](https://etvbharatimages.akamaized.net/etvbharat/prod-images/4357384_kpcc.jpg)
ಸರ್ಕಾರದ ತಪ್ಪು ನೀತಿ ನಿಯಮಗಳ ವಿರುದ್ಧ ಮಾತನಾಡಿದರೆ ಕೇಸ್ ಹಾಕುತ್ತಾರೆ ಎಂದು ಕೆಪಿಸಿಸಿ ಟ್ವಿಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕಿದೆ.
ನಿನ್ನೆ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ಮಾಡಲು ಬರಲಿಲ್ಲ, ಆದರೀಗ ಚಂದ್ರಯಾನ ವೀಕ್ಷಣೆಗೆ ಬರುತ್ತಿದ್ದಾರೆಂದು ವ್ಯಂಗ್ಯವಾಗಿ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದ ಹುಬ್ಬಳ್ಳಿ- ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ, ಶಾಜಾಮಾನ್ ಮುಜಾಹಿದ್ದ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಇದರ ವಿರುದ್ದ ಕೆಪಿಸಿಸಿ ಅಸಮಾಧಾನ ವ್ಯಕ್ತಪಡಿಸುತ್ತಿದೆ.