ಧಾರವಾಡ:ಅಕ್ರಮ ಗೋವು ಸಾಗಾಟ ಆರೋಪದ ಮೇಲೆ ಟಾಟಾ ಏಸ್ ವಾಹನದ ಗಾಜು ಒಡೆದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ತಾಲೂಕಿನ ಸೋಮಾಪೂರ ಗ್ರಾಮದ ಬಳಿ ನಡೆದಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಆಕಳುಗಳನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಗೋ ರಕ್ಷಕರ ಹೆಸರಲ್ಲಿ ವಾಹನವನ್ನು ಜಖಂಗೊಳಿಸಿದ್ದಾರೆ. ಗೋವುಗಳನ್ನು ಕೆಳಗಿಳಿಸಿ ವಾಹನ ಸುಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ವಾಹನದಲ್ಲಿ ಸಾಗಿಸುತ್ತಿದ್ದ ಹಸುಗಳು ದೇವರಿಗೆ ಬಿಟ್ಟವು ಎನ್ನಲಾಗುತ್ತಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.