ಹುಬ್ಬಳ್ಳಿ: ಅಕ್ರಮ ಮದ್ಯ ಮಾರಾಟ ವಿರುದ್ಧ ಕಲಘಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಸಿಎಂ ನಿಂಬಣ್ಣವರ್ ಧ್ವನಿ ಎತ್ತಿದ್ದಾರೆ. ಕಲಘಟಗಿ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ವಿಪರೀತವಾಗಿದೆ. ಸರ್ಕಾರ ತಕ್ಷಣ ಬ್ರೇಕ್ ಹಾಕದಿದ್ದರೆ ಬರುವ ಸಂಕ್ರಾಂತಿಯೊಳಗೆ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಸಾರ್ವಜನಿಕರು ಮತ್ತು ಮಹಿಳೆಯರ ಜೊತೆ ಸೇರಿ ಹೋರಾಟ ಮಾಡಲಾಗುವುದು ಎಂದು ಆಡಳಿತ ಪಕ್ಷದ ಶಾಸಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಬೇರೆಬೇರೆ ರಾಜ್ಯದಲ್ಲಿ ಈಗಾಗಲೇ ಮದ್ಯ ಮಾರಾಟ ಈಗಾಗಲೇ ಸ್ಥಗಿತಗೊಂಡಿದೆ.
ಈಗಾಗಲೇ ಮಂಜೂರಾಗಿ ಸರ್ಕಾರಿ ಹಾಗೂ ಖಾಸಗಿ ಒಡೆತನದ ಮದ್ಯದಂಗಡಿಗಳು ತಾಲೂಕಿನಲ್ಲಿ ಕೆಲವು ಗ್ರಾಮಗಳನ್ನ ಹಂಚಿಕೊಂಡು ಕಾನೂನು ಬಾಹಿರವಾಗಿ ಮದ್ಯವನ್ನ ಹಗಲು ರಾತ್ರಿಯೆನ್ನದೇ ಸರಬರಾಜು ಮಾಡುತ್ತಿವೆ. ಇದರಿಂದ ಸಾರ್ವಜನಿಕ ನೆಮ್ಮದಿ ಹಾಳಾಗುತ್ತಿದೆ. ತಾಲೂಕಿನಲ್ಲಿರುವ ಸರ್ಕಾರಿ, ಖಾಸಗಿ ಮದ್ಯದಂಗಡಿಗಳು ತಕ್ಷಣ ಬಂದ್ ಮಾಡಬೇಕು. ತಕ್ಷಣ ನಿಲ್ಲಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸ್ಥಳೀಯ ಪೊಲೀಸ್, ಅಬಕಾರಿ ಇಲಾಖೆಯ ಅಧಿಕಾರಿಗಳು ಮುಂದಾಗಬೇಕೆಂದು ಒತ್ತಾಯಿಸಿದರು.